AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ, World Cup: ಭಾರತ-ನ್ಯೂಝಿಲೆಂಡ್ ಹೈವೋಲ್ಟೇಜ್ ಪಂದ್ಯಕ್ಕೆ ಸಜ್ಜಾದ ಧರ್ಮಶಾಲಾ ಸ್ಟೇಡಿಯಂ

IND vs NZ, World Cup: ಭಾರತ-ನ್ಯೂಝಿಲೆಂಡ್ ಹೈವೋಲ್ಟೇಜ್ ಪಂದ್ಯಕ್ಕೆ ಸಜ್ಜಾದ ಧರ್ಮಶಾಲಾ ಸ್ಟೇಡಿಯಂ

Vinay Bhat
|

Updated on:Oct 22, 2023 | 12:18 PM

Himachal Pradesh Cricket Association Stadium View: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂ ಪಿಚ್ ವೇಗದ ಬೌಲರ್‌ಗಳಿಗೆ ಸಹಾಯಕವಾಗಿದೆ. ಈ ಪಿಚ್​ನಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ 231 ಆಗಿದ್ದು, ಎರಡನೇ ಇನ್ನಿಂಗ್ಸ್‌ನಲ್ಲಿ 199 ರನ್ ಕಲೆಹಾಕಿರುವುದೇ ಇಲ್ಲಿನವರೆಗಿನ ದಾಖಲೆಯಾಗಿದೆ.

ಭಾರತದ ಅತ್ಯಂತ ಸುಂದರವಾದ ಕ್ರಿಕೆಟ್ ಸ್ಟೇಡಿಯಂ ಎಂದು ಖ್ಯಾತಿ ಪಡೆದಿರುವ ಧರ್ಮಶಾಲಾದ (Dharmashala) ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಇಂದು ಭಾರತ ಹಾಗೂ ನ್ಯೂಝಿಲೆಂಡ್ ನಡುವೆ ಐಸಿಸಿ ಏಕದಿನ ವಿಶ್ವಕಪ್​ನ 21ನೇ ಪಂದ್ಯ ನಡೆಯಲಿದೆ. ಈ ಬಾರಿಯ ಟೂರ್ನಿಯಲ್ಲಿ ಒಂದೇ ಒಂದು ಸೋಲು ಕಾಣದಿರುವ ರೋಹಿತ್ ಶರ್ಮಾ ಹಾಗೂ ಕಿವೀಸ್ ಪಡೆಯ ಸೆಣೆಸಾಟ ಸಾಕಷ್ಟು ರೋಚಕತೆ ಸೃಷ್ಟಿಸಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂ ಪಿಚ್ ವೇಗದ ಬೌಲರ್‌ಗಳಿಗೆ ಸಹಾಯಕವಾಗಿದೆ. ಈ ಪಿಚ್​ನಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ 231 ಆಗಿದ್ದು, ಎರಡನೇ ಇನ್ನಿಂಗ್ಸ್‌ನಲ್ಲಿ 199 ರನ್ ಕಲೆಹಾಕಿರುವುದೇ ಇಲ್ಲಿನವರೆಗಿನ ದಾಖಲೆಯಾಗಿದೆ. ಮೊದಲ ಬ್ಯಾಟಿಂಗ್‌ ಮಾಡುವ ತಂಡಕ್ಕೆ ಹೋಲಿಸಿದರೆ ಎರಡನೇ ಬ್ಯಾಟಿಂಗ್ ಮಾಡುವ ತಂಡಗಳಿಗೆ ಹೆಚ್ಚಿನ ಯಶಸ್ಸು ಲಭಿಸಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 22, 2023 12:13 PM