ಹಿಮಾಚಲದ ಬಿಲಾಸ್ಪುರದಲ್ಲಿ ಭೀಕರ ಭೂಕುಸಿತ; ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

Updated on: Oct 07, 2025 | 10:44 PM

ಬಿಲಾಸ್ಪುರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 18 ಜನರು ಮೃತಪಟ್ಟಿದ್ದಾರೆ. ಈ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದು, ಸಂತ್ರಸ್ತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ.

ಬಿಲಾಸ್ಪುರ, ಅಕ್ಟೋಬರ್ 7: ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ (Himachal Pradesh Landslide) ಸಂಭವಿಸಿದ ಭೀಕರ ಅಪಘಾತದಲ್ಲಿ 18 ಜನರು ಮೃತಪಟ್ಟಿದ್ದಾರೆ. ಈ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದು, ಸಂತ್ರಸ್ತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50,000 ರೂ.ಗಳ ಪರಿಹಾರ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ಬಸ್​​ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಚಲಿಸುತ್ತಿದ್ದ ಬಸ್ ಭೂಕುಸಿತದಲ್ಲಿ ಸಿಲುಕಿಕೊಂಡಿದ್ದು, ಅವಶೇಷಗಳು ಮತ್ತು ಬಂಡೆಗಳು ನೇರವಾಗಿ ವಾಹನದ ಮೇಲೆ ಬಿದ್ದು ಪ್ರಯಾಣಿಕರು ಒಳಗೆ ಸಿಲುಕಿಕೊಂಡಿದ್ದಾರೆ. ಈಗಾಗಲೇ 18 ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರನ್ನು ಜೀವಂತವಾಗಿ ರಕ್ಷಿಸಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ