ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್

Updated on: Jun 20, 2025 | 5:33 PM

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಪ್ರವಾಹ ಹಾಗೂ ಭೂಕುಸಿತ ಉಂಟಾಗಿದೆ. ಭಾನುವಾರ, ಸೋಮವಾರ, ಬುಧವಾರ ಮತ್ತು ಗುರುವಾರ ರಾಜ್ಯದ ಪ್ರತ್ಯೇಕ ಭಾಗಗಳಲ್ಲಿ ಭಾರೀ ಅಥವಾ ಅತಿ ಹೆಚ್ಚಿನ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ಮಂಗಳವಾರ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಹಳದಿ ಅಲರ್ಟ್ ನೀಡಿದೆ.

ಶಿಮ್ಲಾ, ಜೂನ್ 20: ಹಿಮಾಚಲ ಪ್ರದೇಶದ (Himachal Pradesh Landslide) ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದರಿಂದ ಅನೇಕ ಸ್ಥಳಗಳಲ್ಲಿ ಭೂಕುಸಿತ ಸಂಭವಿಸಿದ ವರದಿಯಾಗಿದೆ. ಜೂನ್ 22, 23, 25 ಮತ್ತು 26ರಂದು ಅನೇಕ ಸ್ಥಳಗಳಲ್ಲಿ ಭಾರೀ ಅಥವಾ ಅತಿ ಭಾರೀ ಮಳೆಯಾಗುವ ಬಗ್ಗೆ ಸ್ಥಳೀಯ ಹವಾಮಾನ ಕಚೇರಿ ಇಂದು ಆರೆಂಜ್ ಅಲರ್ಟ್ (Orange Alert) ನೀಡಿದೆ. ಧರ್ಮಶಾಲಾ-ಚಟಾರೋ-ಗಗ್ಗಲ್ ರಸ್ತೆಯಲ್ಲಿ ಭೂಕುಸಿತದಿಂದಾಗಿ ಸಂಚಾರ ಸ್ಥಗಿತಗೊಂಡಿದೆ. ಹಿಮಾಚಲ ಪ್ರದೇಶದ ನಹಾನ್‌ನಲ್ಲಿ ಅತಿ ಹೆಚ್ಚು ಮಳೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ