AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ: ಮಂಜಿನ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ: ಮಂಜಿನ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

ಸೂರಜ್ ಪ್ರಸಾದ್ ಎಸ್ಎನ್
| Edited By: |

Updated on: Oct 24, 2026 | 2:55 PM

Share

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಹಿಂಗಾರು ಮಳೆಯಿಂದ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ. ಮೂರು ದಿನಗಳ ನಿರಂತರ ಮಳೆಯಿಂದ ದಟ್ಟ ಕಾನನದ ನಡುವೆ ಮಂಜಿನ ಸೊಬಗು ಮೂಡಿದ್ದು, ಪ್ರಕೃತಿಯ ಮನಮೋಹಕ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಆಗಮಿಸಿದ ಪ್ರವಾಸಿಗರು ಫೋಟೊಶೂಟ್‌ಗಳಲ್ಲಿ ತೊಡಗಿಸಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಚಾಮರಾಜನಗರ, ಅಕ್ಟೋಬರ್ 24: ಜಿಲ್ಲೆಯಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಮಂಜಿನ ಮುಸುಕಿನಲ್ಲಿ ಕಂಗೊಳಿಸುತ್ತಿದೆ. ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ದಟ್ಟ ಕಾನನದ ನಡುವೆ ತಲೆ ಎತ್ತಿ ನಿಂತಿರುವ ದಕ್ಷಿಣದ ಗೋವರ್ಧನಗಿರಿ, ಮಂಜಿನ ಮಾಯಾಜಾಲದಿಂದ ಪ್ರವಾಸಿಗರನ್ನು ಪುಳಕಿತಗೊಳಿಸುತ್ತಿದೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಟ್ಟದ ಸುತ್ತಮುತ್ತಲಿನ ಕಾನನ ಹಸಿರಿನಿಂದ ಕಂಗೊಳಿಸುತ್ತಿದೆ. ಬೆಟ್ಟವನ್ನು ಆವರಿಸಿರುವ ಮಂಜು ಪ್ರಕೃತಿಯ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದ್ದು, ಈ ಮನಮೋಹಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಆಗಮಿಸುತ್ತಿರುವ ಯಾತ್ರಿಕರು ಹಾಗೂ ಪ್ರವಾಸಿಗರು ಸಂಭ್ರಮಿಸುತ್ತಿದ್ದಾರೆ. ಹಿಂಗಾರು ಮಳೆಯ ನಡುವೆ ಗೋಪಾಲಸ್ವಾಮಿ ಬೆಟ್ಟದಲ್ಲಿ ಪ್ರಕೃತಿಯ ಸೊಬಗು ಪ್ರವಾಸಿಗರ ಮನಸೂರೆಗೊಳ್ಳುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೂರಜ್ ಪ್ರಸಾದ್ ಎಸ್ಎನ್
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More