AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದಂತೆ ಭಾಸವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ: ಕಣ್ಮನ ಸೆಳೆಯುವ ವಿಡಿಯೋ ಇಲ್ಲಿದೆ ನೋಡಿ

ಕಾಶ್ಮೀರದಂತೆ ಭಾಸವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ: ಕಣ್ಮನ ಸೆಳೆಯುವ ವಿಡಿಯೋ ಇಲ್ಲಿದೆ ನೋಡಿ

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Oct 25, 2025 | 7:45 AM

Share

ಹಿಮವದ್ ಗೋಪಾಲಸ್ವಾಮಿ ಬೆಟ್ಟ ದಟ್ಟವಾದ ಮಂಜಿನಿಂದ ಆವೃತವಾಗಿದ್ದು, ಪ್ರವಾಸಿಗರನ್ನು ಸೆಳೆಯುತ್ತಿದೆ. ವರ್ಷವಿಡೀ ಮಂಜಿನಿಂದ ಕೂಡಿರುವ ಬೆಟ್ಟ ಈ ವರ್ಷ ಹ್ಎಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರ ಸೆಳೆಯುತ್ತಿದೆ. ಪ್ರವಾಸಿಗರ ಮೊಬೈಲ್​ನಲ್ಲಿ ಸೆರೆಯಾಗಿರುವ ವಿಡಿಯೋ ಸದ್ಯ ವೈರಲ್ ಆಗುತ್ತಿದ್ದು, ಹಿಮವದ್ ಗೋಪಾಲಸ್ವಾಮಿ ಬೆಟ್ಟವನ್ನು ಕರ್ನಾಟಕದ ಕಾಶ್ಮೀರ ಎಂದೇ ಪ್ರವಾಸಿಗರು ಕೊಂಡಾಡುತ್ತಿದ್ದಾರೆ. ವಿಡಿಯೋ ಇಲ್ಲಿದೆ.

ಚಾಮರಾಜನಗರ, ಅಕ್ಟೋಬರ್ 25: ಸೈಕ್ಲೋನ್ ಪರಿಣಾಮ ಮತ್ತು ಜಿಟಿಜಿಟಿ ಮಳೆಯಿಂದಾಗಿ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟ ದಟ್ಟವಾದ ಮಂಜಿನಿಂದ ಆವೃತವಾಗಿ ಕಾಶ್ಮೀರದಂತೆ ಗೋಚರಿಸುತ್ತಿದೆ. ದಕ್ಷಿಣ ಗೋವರ್ಧನಗಿರಿ ಎಂದೇ ಖ್ಯಾತಿ ಪಡೆದಿರುವ, ವರ್ಷವಿಡೀ ಹಿಮದಿಂದ ಕೂಡಿರುತ್ತದೆ. ಸದ್ಯ ಚಿತ್ತಾಕರ್ಷಕ ನೋಟದೊಂದಿಗೆ ಪ್ರವಾಸಿಗರನ್ನು ಸೆಳೆಯುತ್ತಿದೆ. ಮಂಜಿನ ಮುಸುಕಲ್ಲೇ ಗೋಪಾಲಸ್ವಾಮಿಯ ದರ್ಶನ ಪಡೆದ ಭಕ್ತಗಣ, ಮೊಬೈಲ್ ಕ್ಯಾಮರದಲ್ಲಿ ಸೆರೆ ಹಿಡಿದಿರುವ ವಿಡಿಯೋ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 25, 2025 07:38 AM
Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More