‘ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ’: ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ

Edited By:

Updated on: Aug 22, 2026 | 5:52 PM

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಹಣ ಕೊಟ್ಟರೆ ಗಾಂಜಾ, ಮೊಬೈಲ್, ಐಷಾರಾಮಿ ಜೀವನ ಮತ್ತು ವೇಶ್ಯಾವಾಟಿಕೆಯಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತವೆ ಎಂದು ಕೈದಿ ಸಾಯಿಕುಮಾರ್ ಸ್ಫೋಟಕ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಈ ಆರೋಪಗಳಿಗೆ ತನ್ನ ಬಳಿ ಪುರಾವೆಗಳಿವೆ ಎಂದು ಹೇಳಿರುವ ಸಾಯಿಕುಮಾರ್, ಜೈಲು ಅಧಿಕಾರಿಗಳ ನೇರ ಪಾತ್ರದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ, ಆ.22: ಜಿಲ್ಲೆಯ ಹಿಂಡಲಗಾ ಜೈಲು ಮತ್ತೊಮ್ಮೆ ಅಕ್ರಮ ಚಟುವಟಿಕೆಗಳ ಆರೋಪದೊಂದಿಗೆ ಸುದ್ದಿಯಲ್ಲಿದೆ. ಕುಣಿಗಲ್ ಮೂಲದ, 20ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿರುವ ಕೈದಿ ಸುರೇಶ್ ಅಲಿಯಾಸ್ ಸಾಯಿಕುಮಾರ್ ಜೈಲಿನ ಒಳಗಿನ ರಹಸ್ಯಗಳನ್ನು ವಿಡಿಯೋ ಹೇಳಿಕೆ ಮೂಲಕ ಬಹಿರಂಗಪಡಿಸಿದ್ದಾರೆ. ಈ ಹೇಳಿಕೆ ಸದ್ಯ ಬಂಧಿಖಾನೆ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ. ಸಾಯಿಕುಮಾರ್‌ರ ಪ್ರಕಾರ, ಹಿಂಡಲಗಾ ಜೈಲಿನಲ್ಲಿ ಹಣ ಕೊಟ್ಟರೆ ಕೈದಿಗಳು ಐಷಾರಾಮಿ ಜೀವನ ನಡೆಸಲು ಗಾಂಜಾ, ಮೊಬೈಲ್, ಟಿವಿ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಬಹುದು. ಅತ್ಯಂತ ಗಂಭೀರ ಆರೋಪವೆಂದರೆ, ಜೈಲಿನ ಆವರಣದಲ್ಲಿ ವೇಶ್ಯಾವಾಟಿಕೆ ಕೂಡ ನಡೆಯುತ್ತದೆ ಎಂದು ಸಾಯಿಕುಮಾರ್ ಹೇಳಿದ್ದಾರೆ. ಈ ಅಕ್ರಮಗಳಿಗೆ ಜೈಲು ಅಧಿಕಾರಿಗಳೇ ನೇರವಾಗಿ ಭಾಗಿಯಾಗಿದ್ದಾರೆ ಎಂದು ಆತ ಆರೋಪಿಸಿದ್ದಾರೆ. ತಪಾಸಣೆಯ ಹೊರತಾಗಿಯೂ ಮೊಬೈಲ್ ಇತ್ಯಾದಿ ವಸ್ತುಗಳು ಹೇಗೆ ಜೈಲು ಪ್ರವೇಶಿಸುತ್ತವೆ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ತನ್ನ ಬಳಿ ಪುರಾವೆಗಳಿದ್ದು, ಮೇಲಾಧಿಕಾರಿಗಳಿಗೆ ದೂರು ನೀಡಿರುವುದಾಗಿ ಸಾಯಿಕುಮಾರ್ ತಿಳಿಸಿದ್ದಾರೆ. ಆದರೆ, ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆತ ದೂರಿದ್ದಾರೆ. ಈತ ಜೈಲಿನಿಂದ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಈ ಹೇಳಿಕೆ ನೀಡಿದ್ದು, ಬಳಿಕ ಗುಂಡಾ ಕಾಯ್ದೆಯಡಿ ಪುನಃ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಈ ಗಂಭೀರ ಆರೋಪಗಳ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿಬಂದಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 22, 2026 05:51 PM
Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More