ನಮ್ಮ ಕಾಲದಲ್ಲೂ ಹಿಂದಿ ಕಡ್ಡಾಯವಾಗಿರಲಿಲ್ಲ ಎಂದ ಸಿಎಂ ಸಿದ್ದರಾಮಯ್ಯ
ಸಿದ್ರಾಮಯ್ಯ ಅವರು SSLC ಪರೀಕ್ಷೆಯಲ್ಲಿ ಹಿಂದಿ ತೃತೀಯ ಭಾಷೆ ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದು ಮಕ್ಕಳ ಮೇಲಿನ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಸರ್ಕಾರ ಕೈಗೊಂಡ ನಿರ್ಧಾರವಾಗಿದೆ. ಹಿಂದಿ ಕಲಿಯುವುದಕ್ಕೆ ವಿರೋಧವಿಲ್ಲ, ಆದರೆ ಪರೀಕ್ಷೆಯಲ್ಲಿ ಕಡ್ಡಾಯಗೊಳಿಸುವುದಕ್ಕೆ ವಿರೋಧವಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ವಿರೋಧವಿದ್ದರೂ ಸರ್ಕಾರದ ತೀರ್ಮಾನ ಮುಂದುವರೆಯಲಿದೆ.
ಮೈಸೂರು, ಮಾರ್ಚ್ 28: ರಾಜ್ಯ ಸರ್ಕಾರ SSLC ಪರೀಕ್ಷೆಯಲ್ಲಿ ಹಿಂದಿ ತೃತೀಯ ಭಾಷೆಯನ್ನು ಕಡ್ಡಾಯವಲ್ಲ ಎಂದು ಘೋಷಿಸಿದೆ. ಸದ್ಯ ಈ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಹಿಂದಿ ಕಲಿಯಬಾರದು ಎಂದು ಹೇಳುತ್ತಿಲ್ಲ. ಕಡ್ಡಾಯ ಬೇಡ ಎಂದು ಹೇಳುತ್ತಿದ್ದೇನೆ. ಸುಮ್ಮನೆ ಹಿಂದಿ ಹೇರಿಕೆಯಾಗಬಾರದು ಎಂದಿದ್ದಾರೆ. ವಿರೋಧ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರದ ಈ ನಿರ್ಧಾರವನ್ನ ಎಲ್ಲರೂ ಒಪ್ಪಿಕೊಳ್ಳಬೇಕು. ಯಾರೋ ಕೆಲವರು ವಿರೋಧಿಸಿದರೆ ಹಿಂದೆ ಸರಿಯಲ್ಲ. ಎಲ್ಲ ರೀತಿ ಪರಾಮರ್ಶಿಸಿ ಸರ್ಕಾರ ನಿರ್ಧಾರ ಮಾಡಿದೆ. ಎಲ್ಲರೂ ಈ ನಿರ್ಧಾರವನ್ನು ಒಪ್ಪಿಕೊಳ್ಳಬೇಕು. ಈ ವರ್ಷದಿಂದಲೇ ಪರೀಕ್ಷೆಯಲ್ಲಿ ಇದು ಜಾರಿ ಆಗುತ್ತೆ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
