ಉಡುಪಿ ಕೃಷ್ಣ ಮಠದ ಬಳಿ ಸಿಕ್ಕ ಚೈತ್ರಾ ಕುಂದಾಪುರ, ಬಂಧನದ ವೇಳೆ ಹೈಡ್ರಾಮಾ
ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ವ್ಯಕ್ತಿಯೋರ್ವರಿಗೆ 3.5 ಕೋಟಿ ರೂ. ವಂಚನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರಳನ್ನ ಬಂಧಿಸಿದ್ದಾರೆ. ಸಿನಿಮೀಯ ಶೈಲಿಯಲ್ಲಿ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಶ್ರೀಕಾಂತ್ ನಾಯಕ್ ಪೆಲತ್ತೂರು ಮತ್ತು ಚೈತ್ರಾ ಕುಂದಾಪುರ ಅವರನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧನದ ವೇಳೆ ಚೈತ್ರಾ ಕುಂದಾಪುರ ಹೈಡ್ರಾಮಾ ಮಾಡಿದ್ದಾಳೆ.
ಉಡುಪಿ, (ಸೆಪ್ಟೆಂಬರ್ 13): ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ವ್ಯಕ್ತಿಯೋರ್ವರಿಗೆ 3.5 ಕೋಟಿ ರೂ. ವಂಚನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರಳನ್ನ(Chaitra Kundapura) ಬಂಧಿಸಿದ್ದಾರೆ. ಸಿನಿಮೀಯ ಶೈಲಿಯಲ್ಲಿ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಶ್ರೀಕಾಂತ್ ನಾಯಕ್ ಪೆಲತ್ತೂರು ಮತ್ತು ಚೈತ್ರಾ ಕುಂದಾಪುರ ಅವರನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧನದ ವೇಳೆ ಚೈತ್ರಾ ಕುಂದಾಪುರ ಹೈಡ್ರಾಮಾ ಮಾಡಿದ್ದಾಳೆ. ಕೈಬಳೆ ಒಡೆದುಕೊಂಡು, ಉಂಗುರ ನುಂಗಲು ಯತ್ನಿಸಿದ್ದಾಳೆ. ಆದ್ರೆ, ಪೊಲೀಸರು ಇಂದು (ಸೆಪ್ಟೆಂಬರ್ 13) ಬೆಳಗ್ಗೆಯೇ ಉಡುಪಿಯಿಂದ ಬೆಂಗಳೂರಿಗೆ ಕರೆದುಕೊಂಡು ಹೋದರು.
ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ 3.5 ಕೋಟಿ ರೂ. ವಂಚಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಉಡುಪಿಯಲ್ಲಿ ಸಿಸಿಬಿ ಟೀಂ, ಚೈತ್ರಾ ಹಾಗೂ ಶ್ರೀಕಾಂತ್ ನಾಯಕ್ನನ್ನು ಬಂಧಿಸಿ ಬೆಂಗಳೂರಿಗೆ ಕರೆತರುತ್ತಿದ್ದು, ಇಂದು (ಸೆಪ್ಟೆಂಬರ್ 13) ಸಂಜೆ ಜಡ್ಜ್ ಮುಂದೆ ಹಾಜರುಪಡಿಸಲಿದೆ.
ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
