ಉಡುಪಿ ಕೃಷ್ಣ ಮಠದ ಬಳಿ ಸಿಕ್ಕ ಚೈತ್ರಾ ಕುಂದಾಪುರ, ಬಂಧನದ ವೇಳೆ ಹೈಡ್ರಾಮಾ

| Updated By: ರಮೇಶ್ ಬಿ. ಜವಳಗೇರಾ

Updated on: Sep 13, 2023 | 11:22 AM

ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ವ್ಯಕ್ತಿಯೋರ್ವರಿಗೆ 3.5 ಕೋಟಿ ರೂ. ವಂಚನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರಳನ್ನ ಬಂಧಿಸಿದ್ದಾರೆ. ಸಿನಿಮೀಯ ಶೈಲಿಯಲ್ಲಿ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಶ್ರೀಕಾಂತ್ ನಾಯಕ್ ಪೆಲತ್ತೂರು ಮತ್ತು ಚೈತ್ರಾ ಕುಂದಾಪುರ ಅವರನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧನದ ವೇಳೆ ಚೈತ್ರಾ ಕುಂದಾಪುರ ಹೈಡ್ರಾಮಾ ಮಾಡಿದ್ದಾಳೆ.

ಉಡುಪಿ, (ಸೆಪ್ಟೆಂಬರ್ 13): ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ವ್ಯಕ್ತಿಯೋರ್ವರಿಗೆ 3.5 ಕೋಟಿ ರೂ. ವಂಚನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರಳನ್ನ(Chaitra Kundapura)  ಬಂಧಿಸಿದ್ದಾರೆ. ಸಿನಿಮೀಯ ಶೈಲಿಯಲ್ಲಿ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಶ್ರೀಕಾಂತ್ ನಾಯಕ್ ಪೆಲತ್ತೂರು ಮತ್ತು ಚೈತ್ರಾ ಕುಂದಾಪುರ ಅವರನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧನದ ವೇಳೆ ಚೈತ್ರಾ ಕುಂದಾಪುರ ಹೈಡ್ರಾಮಾ ಮಾಡಿದ್ದಾಳೆ. ಕೈಬಳೆ ಒಡೆದುಕೊಂಡು, ಉಂಗುರ ನುಂಗಲು ಯತ್ನಿಸಿದ್ದಾಳೆ. ಆದ್ರೆ, ಪೊಲೀಸರು ಇಂದು (ಸೆಪ್ಟೆಂಬರ್ 13) ಬೆಳಗ್ಗೆಯೇ ಉಡುಪಿಯಿಂದ ಬೆಂಗಳೂರಿಗೆ ಕರೆದುಕೊಂಡು ಹೋದರು.

ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ 3.5 ಕೋಟಿ ರೂ. ವಂಚಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಉಡುಪಿಯಲ್ಲಿ ಸಿಸಿಬಿ ಟೀಂ, ಚೈತ್ರಾ ಹಾಗೂ ಶ್ರೀಕಾಂತ್ ನಾಯಕ್​ನನ್ನು ಬಂಧಿಸಿ ಬೆಂಗಳೂರಿಗೆ ಕರೆತರುತ್ತಿದ್ದು, ಇಂದು (ಸೆಪ್ಟೆಂಬರ್ 13) ಸಂಜೆ ಜಡ್ಜ್ ಮುಂದೆ ಹಾಜರುಪಡಿಸಲಿದೆ.

ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:45 am, Wed, 13 September 23

Follow us on