ಚಾಮರಾಜಪೇಟೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ, ಹಿಂದೂ ಸಂಘಟನೆ ಕಾರ್ಯಕರ್ತರ ಅಸಮಾಧಾನ, ಆಕ್ರೋಶ

|

Updated on: Aug 15, 2023 | 1:02 PM

Independence Day 2023: ಚಾಮರಾಜಪೇಟೆಯ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಯೋಜಿಸಿದ ಕ್ರಮ ಮತ್ತು ಜಿಲ್ಲಾಡಳಿತ ತಮ್ಮನ್ನು ಕಡೆಗಣಿಸಿದ್ದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರು: ನಾಡಿನೆಲ್ಲೆಡೆ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸಡಗರ ಸಂಭ್ರಮಗಳಿಂದ ಆಚರಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನಗರದ ಮಾಣಿಕ್ ಶಾ ಮೈದಾನದಲ್ಲಿ ದ್ವಜಾರೋಹಣ ನಡೆಸಿ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತಾಡಿದರು. ಚಾಮರಾಜಪೇಟೆಯಲ್ಲಿ ಬೆಂಗಳೂರು ಉತ್ತರ ವಿಭಾಗದ ಉಪವಿಭಾಗಾಧಿಕಾರಿ ಅರ್ಜುನ್ ಒಡೆಯರ್ ದ್ವಜಾರೋಹಣ ಮಾಡಿದರು. ಸ್ಥಳೀಯ ಶಾಸಕ ಮತ್ತು ವಸತಿ ಖಾತೆ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ (BZ Zameer Ahmed Khan) ವಿಜಯನಗರ ಜಿಲ್ಲೆಯ ಉಸ್ತುವಾರಿ ಸಚಿವರು ಸಹ ಆಗಿರುವುದರಿಂದ ಅವರು ಹೊಸಪೇಟೆಯಲ್ಲಿ ಧ್ವಜಾರೋಹಣ ಮಾಡಿದರು. ಚಾಮರಾಜಪೇಟೆಯ ಹಿಂದೂ ಸಂಘಟನೆಗಳ ಕಾರ್ಯಕರ್ತರು (Hindu activists) ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಯೋಜಿಸಿದ ಕ್ರಮ ಮತ್ತು ಜಿಲ್ಲಾಡಳಿತ ತಮ್ಮನ್ನು ಕಡೆಗಣಿಸಿದ್ದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ವರ್ಷ ಸ್ವಾತಂತ್ರ್ಯೋತ್ಸವದ ದಿನವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗಿತ್ತು ಅದರೆ, ಈ ಬಾರಿ ಯಾವುದನ್ನೂ ವ್ಯವಸ್ಥೆಗೊಳಿಸದೆ ಆಚರಿಸಲಾಗಿದೆ ಎಂದು ಹಿಂದೂ ಕಾರ್ಯಕರ್ತರು ದೂರಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 15, 2023 01:02 PM