ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಭಾವೈಕ್ಯತೆ ಮೆರೆದಿದ್ದಾರೆ. ಈದ್ ಮಿಲಾದ್ ಅಂಗವಾಗಿ ಮಕ್ಕಳಿಗೆ ಪುಸ್ತಕ ಹಾಗೂ ಹೋಳಿಗೆ ವಿತರಣೆ ಮಾಡಲಾಗಿದೆ. ಗಣೇಶೋತ್ಸವದಲ್ಲಿ ಮುಸ್ಲಿಂ ಬಾಂಧವರು ಭಾಗಿಯಾಗಿದ್ದಾರೆ. ಪರಸ್ಪರ ಶುಭ ಕೋರಿ ಮಾನವೀಯತೆ ಮೆರೆದಿದ್ದಾರೆ.
ಮೈಸೂರು, ಸೆ.16: ರಾಜ್ಯದ ಹಲವೆಡೆ ಹಿಂದೂ-ಮುಸ್ಲಿಂ ಸಮುದಾಯದ ನಡುವೆ ಗಲಾಟೆಗಳು ನಡೆಯುತ್ತಿವೆ. ಇದರ ನಡುವೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಭಾವೈಕ್ಯತೆ ಮೆರೆದಿದ್ದಾರೆ. ಈದ್ ಮಿಲಾದ್ ಅಂಗವಾಗಿ ಮಕ್ಕಳಿಗೆ ಪುಸ್ತಕ ಹಾಗೂ ಹೋಳಿಗೆ ವಿತರಣೆ ಮಾಡಲಾಗಿದೆ. ಮೈಸೂರಿನ ಸುಣ್ಣದ ಕೇರಿಯಲ್ಲಿ ಶ್ರೀವಿನಾಯಕ ಗೆಳೆಯರ ಬಳಗದಿಂದ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿದ್ದು ಗಣೇಶೋತ್ಸವದಲ್ಲಿ ಮುಸ್ಲಿಂ ಬಾಂಧವರು ಭಾಗಿಯಾಗಿದ್ದಾರೆ. ಪರಸ್ಪರ ಶುಭ ಕೋರಿ ಮಾನವೀಯತೆ ಮೆರೆದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ