Hassan: ಬಕ್ರೀದ್ ಹಿನ್ನೆಲೆ ಶಾಲೆಯಲ್ಲಿ ಮಕ್ಕಳಿಂದ ಸಾಮೂಹಿಕ ನಮಾಜ್; ಶಾಲೆ ಆಡಳಿತ ಮಂಡಳಿ ಹೇಳಿದ್ದೇನು?
ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಜ್ಞಾನಸಾಗರ ಇಂಟರ್ ನ್ಯಾಷನಲ್ ಶಾಲೆಯ ವಿರುದ್ಧ ಹಿಂದೂ ಸಂಘಟನೆಗಳು ಗಂಭೀರ ಆರೋಪ ಮಾಡಿದ್ದಾರೆ. ಮಕ್ಕಳನ್ನು ಒಟ್ಟಿಗೆ ಸೇರಿಸಿ ಮುಸ್ಲಿಂ ಧರ್ಮದ ಶ್ಲೋಕ ಹೇಳಿಸಿದ್ದಾರೆ ಎನ್ನಲಾಗುತ್ತಿದೆ. ಶಾಲಾ ಮಕ್ಕಳ ಸಾಮೂಹಿಕ ಪ್ರಾರ್ಥನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹಾಸನ: ರಾಜ್ಯಾದ್ಯಂತ ವಿಜೃಂಭಣೆಯಿಂದ ಮುಸ್ಲಿಮರು ಬಕ್ರೀದ್ ಹಬ್ಬ ಆಚರಿಸಿದ್ದಾರೆ. ಆದ್ರೆ ಬಕ್ರೀದ್ ಹಿನ್ನೆಲೆ ಶಾಲಾ ಮಕ್ಕಳು ಶಾಲೆಯಲ್ಲಿ ಸಾಮೂಹಿಕ ನಮಾಜ್ ಮಾಡಿರುವ ಆರೋಪ ಹಾಸನದಲ್ಲಿ ಕೇಳಿ ಬಂದಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಜ್ಞಾನಸಾಗರ ಇಂಟರ್ ನ್ಯಾಷನಲ್ ಶಾಲೆಯ ವಿರುದ್ಧ ಹಿಂದೂ ಸಂಘಟನೆಗಳು ಗಂಭೀರ ಆರೋಪ ಮಾಡಿದ್ದಾರೆ. ಮಕ್ಕಳನ್ನು ಒಟ್ಟಿಗೆ ಸೇರಿಸಿ ಮುಸ್ಲಿಂ ಧರ್ಮದ ಶ್ಲೋಕ ಹೇಳಿಸಿದ್ದಾರೆ ಎನ್ನಲಾಗುತ್ತಿದೆ. ಶಾಲಾ ಮಕ್ಕಳ ಸಾಮೂಹಿಕ ಪ್ರಾರ್ಥನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಿಂದೂಪರ ಸಂಘಟನೆ ಕಾರ್ಯಕರ್ತರು ನಿನ್ನೆ ಶಾಲೆ ಮುಂದೆ ಧರಣಿ ನಡೆಸಿದ್ದರು. ಪ್ರಾರ್ಥನೆ ಮಾಡಿಸಿಲ್ಲ, ಕೇವಲ ಭಾವೈಕ್ಯತೆ ಮೂಡಿಸುವ ಸಲುವಾಗಿ ಆಚರಣೆ ಮಾಡಿದ್ದೇವೆ. ಮುಸ್ಲಿಂ ಸಮುದಾಯದ ಮೂರು ಮಕ್ಕಳು ಮಾತ್ರ ನಮಾಜ್ ಮಾಡಿದ್ದಾರೆ. ಉಳಿದ ಮಕ್ಕಳು ಕಣ್ಮುಚ್ಚಿ ಕುಳಿತಿದ್ದರು ಎಂದು ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.
Published On - 9:17 am, Sat, 1 July 23