ಗೂಂಡಾ ಕಾಯಿದೆ ವಿರೋಧಿಸಿ ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

Edited By:

Updated on: Sep 28, 2026 | 4:19 PM

ಗೂಂಡಾ ಕಾಯಿದೆ ಹೇರಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳವು ಬಿ.ಸಿ. ರೋಡ್ ಚಲೋ ಪ್ರತಿಭಟನೆ ನಡೆಸಿತು. ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಜಾಮೀನು ಸಿಕ್ಕರೂ, ಗೂಂಡಾ ಕಾಯಿದೆ ಹೇರಿ ಬಂಧನ ಮುಂದುವರಿಸಲಾಗಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ಆದರೆ, ಆರೋಪಿಗಳ ವಿರುದ್ಧ ಹಲವು ಪ್ರಕರಣಗಳಿರುವುದರಿಂದಲೇ ಕಾಯಿದೆ ಹೇರಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಮಂಗಳೂರು, ಸೆ.28: ಜಿಲ್ಲೆಯ ಬಂಟ್ವಾಳದ ಬಿ.ಸಿ. ರೋಡ್‌ನಲ್ಲಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಭಜರಂಗದಳದ ವತಿಯಿಂದ ಗುರುವಾರ ಬೃಹತ್ ಪ್ರತಿಭಟನೆ ನಡೆಯಿತು. ಹಿಂದೂ ಕಾರ್ಯಕರ್ತರ ಮೇಲೆ ಗೂಂಡಾ ಕಾಯಿದೆ ಹೇರಿರುವುದನ್ನು ಖಂಡಿಸಿ ಈ “ಬಿ.ಸಿ. ರೋಡ್ ಚಲೋ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಳೆದ ವರ್ಷ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 23 ಆರೋಪಿಗಳ ಪೈಕಿ ಎಂಟು ಮಂದಿ ಭಜರಂಗದಳ ಮತ್ತು ವಿಎಚ್‌ಪಿ ಕಾರ್ಯಕರ್ತರ ಮೇಲೆ ಕೆ-ಕೋಕಾ ಕಾಯಿದೆ ಹಾಕಲಾಗಿತ್ತು. ಮೈಸೂರು ನ್ಯಾಯಾಲಯದಲ್ಲಿ ಅವರಿಗೆ ಜಾಮೀನು ಸಿಕ್ಕರೂ, ಬಿಡುಗಡೆಗೂ ಮುನ್ನ ಅವರ ಮೇಲೆ ಗೂಂಡಾ ಕಾಯಿದೆ ಹೇರಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ರಾಜ್ಯ ಸರ್ಕಾರ ಹಾಗೂ ಗೃಹ ಇಲಾಖೆಯ ನಿರ್ದೇಶನದ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎಂದು ಅವರು ದೂರಿದರು. ಮಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಅವರ ವಿರುದ್ಧ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಗೂಂಡಾ ಕಾಯಿದೆಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದರು. ಆದರೆ, ಆರೋಪಿಗಳ ವಿರುದ್ಧ ಕೊಲೆ, ಕೊಲೆ ಯತ್ನ, ಡ್ರಗ್ಸ್ ಮತ್ತು ನೈತಿಕ ಪೊಲೀಸ್‌ಗಿರಿ ಸೇರಿದಂತೆ ಹಲವು ಗಂಭೀರ ಪ್ರಕರಣಗಳಿರುವುದರಿಂದ ಗೂಂಡಾ ಕಾಯಿದೆ ಹೇರಲು ಅರ್ಹರಾಗಿದ್ದಾರೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More