AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!

ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!

ಸುಷ್ಮಾ ಚಕ್ರೆ
|

Updated on: May 19, 2026 | 8:41 PM

Share

ಉತ್ತರ ಪ್ರದೇಶದ ಗಾಜಿಯಾಬಾದ್‌ನ ಎಲ್‌ಎಲ್‌ಬಿ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದ ಆರೋಪಿಯಾದ ಹಿಂದೂ ಯುವ ವಾಹಿನಿ ನಾಯಕ ಸುಶೀಲ್ ಪ್ರಜಾಪತಿ ಜೈಲಿನಿಂದ ಬಿಡುಗಡೆಯಾದಾಗ, ಬೆಂಬಲಿಗರು ಅವರನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ನಡೆಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಹಿಂದೂ ಯುವ ವಾಹಿನಿಯ ನಾಯಕ ಸುಶೀಲ್ ಪ್ರಜಾಪತಿ ಅವರಿಗೆ ಗಾಜಿಯಾಬಾದ್‌ನಲ್ಲಿ ಭವ್ಯ ಸ್ವಾಗತ ನೀಡಲಾಯಿತು.

ಗಾಜಿಯಾಬಾದ್, ಮೇ 19: ಅತ್ಯಾಚಾರ ಆರೋಪದಲ್ಲಿ ಜೈಲು ಸೇರಿದ್ದ ಹಿಂದೂ ಯುವ ವಾಹಿನಿಯ ಗಾಜಿಯಾಬಾದ್ (Ghaziabad) ಘಟಕದ ಮುಖ್ಯಸ್ಥ ಸುಶೀಲ್ ಪ್ರಜಾಪತಿ ಇಂದು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಎಲ್​ಎಲ್​ಬಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ್ದ ಸುಶೀಲ್​ಗೆ ಅವರ ಬೆಂಬಲಿಗರು ಅದ್ದೂರಿಯಾಗಿ ಸ್ವಾಗತಿಸಿದರು. ಕಳೆದ ವರ್ಷ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಂತರ ಅವರು ಸುಮಾರು 9 ತಿಂಗಳು ಜೈಲಿನಲ್ಲಿ ಕಳೆದಿದ್ದರು. ಪ್ರಜಾಪತಿಯನ್ನು ಹಲವಾರು ದೊಡ್ಡ ಹೂವಿನ ಹಾರಗಳಿಂದ ಸ್ವಾಗತಿಸಿ, ಬೆಂಬಲಿಗರು ಹೆಗಲ ಮೇಲೆ ಬೀದಿಗಳಲ್ಲಿ ಕರೆದೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶ ಮತ್ತು ಟೀಕೆಗೆ ಕಾರಣವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More