ಹಿಂದೂ-ಮುಸ್ಲಿಂ ಬಾಂಧವರು ಸೇರಿಕೊಂಡು ಮೊಹರಂ ಹಬ್ಬ ಆಚರಣೆ: ಭಾವೈಕ್ಯತೆಯ ಸಂದೇಶ ಸಾರಿದ ಕುರ್ತಕೋಟಿ ಗ್ರಾಮ
ಗದಗ ತಾಲೂಕಿನ ಕುರ್ತಕೋಟಿ ಗ್ರಾಮದಲ್ಲಿ ಮೊಹರಂ ಹಬ್ಬವನ್ನು ಹಿಂದೂ-ಮುಸ್ಲಿಂ ಒಟ್ಟಿಗೆ ಆಚರಿಸುವ ಮೂಲಕ ಭಾವೈಕ್ಯತೆ ಸಾರಿದ್ದಾರೆ. ಹೆಜ್ಜೆ ಮಜಲು, ಕೋಲಾಟ ಆಡುತ್ತಾ ಅಲೆ ದೇವರ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದಾರೆ.
ಗದಗ, ಜುಲೈ 29: ಶಾಂತಿಗಾಗಿ ಹುತಾತ್ಮರಾದವರನ್ನು ಸ್ಮರಿಸುವ ಶೋಕದ ಹಬ್ಬವೇ ಮೊಹರಂ ಹಬ್ಬ (Muharram). ಭೇದ- ಭಾವ, ಜಾತಿ, ಧರ್ಮ ಎನ್ನದೇ ಭಾವೈಕ್ಯತೆಯ ಈ ಮೊಹರಂ ಹಬ್ಬವನ್ನು ಇಂದು ರಾಜ್ಯದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗಿದೆ. ಅದೇ ರೀತಿಯಾಗಿ ಗದಗ ತಾಲೂಕಿನ ಕುರ್ತಕೋಟಿ ಗ್ರಾಮದಲ್ಲಿ ಸಹ ಮೊಹರಂ ಹಬ್ಬವನ್ನು ಹಿಂದೂ-ಮುಸ್ಲಿಂ ಒಟ್ಟಿಗೆ ಆಚರಿಸುವ ಮೂಲಕ ಭಾವೈಕ್ಯತೆ ಸಾರಿದ್ದಾರೆ. ಅಲೆ ದೇವರ ಮೆರವಣಿಗೆಯಲ್ಲಿ ಹೆಜ್ಜೆ ಮಜಲು, ಕೋಲಾಟ ಆಡುತ್ತಾ ಸಾವಿರಾರು ಜನರು ಭಾಗಿಯಾಗಿದ್ದಾರೆ.
ಮತ್ತಷ್ಟು ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jul 29, 2023 07:21 PM