ಮೈತ್ರಿ ಧರ್ಮ ಪಾಲಿಸಿ ಹಿರಿಯೂರು ಉಪಚುನಾವಣೆ ಎದುರಿಸೋಣ: ಕುಮಾರಸ್ವಾಮಿ ಬಳಿ ಅಮಿತ್​ ಶಾ ಚರ್ಚೆ

Updated on: Nov 20, 2026 | 7:59 AM

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಹಿರಿಯೂರು ಉಪಚುನಾವಣೆ ಕುರಿತು ಚರ್ಚಿಸಿದ್ದಾರೆ. ಹಿರಿಯೂರಿನಲ್ಲಿ ಜೆಡಿಎಸ್ ಅಭ್ಯರ್ಥಿಗೆ ಅವಕಾಶ ನೀಡಲು ಕುಮಾರಸ್ವಾಮಿ ಮನವಿ ಮಾಡಿದ್ದು, ಮೈತ್ರಿ ಧರ್ಮ ಪಾಲಿಸಿ ಒಟ್ಟಾಗಿ ಚುನಾವಣೆ ಎದುರಿಸುವ ಬಗ್ಗೆ ಅಮಿತ್ ಶಾ ಮಾತನಾಡಿದ್ದಾರೆ ಎಂಬುದು ತಿಳಿದುಬಂದಿದೆ.

ನವದೆಹಲಿ, ನವೆಂಬರ್ 20: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಹಿರಿಯೂರು ಉಪಚುನಾವಣೆ ಸೇರಿದಂತೆ ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ. ಹಿರಿಯೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಅವಕಾಶ ನೀಡುವಂತೆ ಕುಮಾರಸ್ವಾಮಿ ಅವರು ಅಮಿತ್ ಶಾ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಹಿರಿಯೂರಿನಲ್ಲಿ ಜೆಡಿಎಸ್ ಉತ್ತಮ ಅವಕಾಶ ಹೊಂದಿದೆ ಎಂಬುದನ್ನು ಅವರು ವಿವರಿಸಿದ್ದಾರೆ ಎಂಬದು ತಿಳಿದುಬಂದಿದೆ. ಶೀಘ್ರದಲ್ಲೇ ಅಭ್ಯರ್ಥಿ ಆಯ್ಕೆ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಕುಮಾರಸ್ವಾಮಿಗೆ ಅಮಿತ್ ಶಾ ಭರವಸೆ ನೀಡಿದ್ದಾರೆ. ಈ ಸಂಬಂಧ ಅಭ್ಯರ್ಥಿ ಅಂತಿಮಗೊಳಿಸುವ ಮೊದಲು ಮಾಜಿ ಪ್ರಧಾನಿ ಹಾಗೂ ಪಕ್ಷದ ವರಿಷ್ಠ ಹೆಚ್.ಡಿ. ದೇವೇಗೌಡರೊಂದಿಗೆ ಚರ್ಚಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

ಮುಂಬರುವ ಚುನಾವಣೆಗಳಲ್ಲಿ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಎಂಪಿ ಮತ್ತು ಎಂಎಲ್ಸಿ ಚುನಾವಣೆಗಳಂತೆ ಮೈತ್ರಿ ಧರ್ಮವನ್ನು ಪಾಲಿಸಿ ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕು ಎಂದು ಅಮಿತ್ ಶಾ ಹೇಳಿರುವುದು ಗೊತ್ತಾಗಿದೆ. ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಕಾರ್ಯತಂತ್ರ ರೂಪಿಸುವ ಕುರಿತು ಇಬ್ಬರೂ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More