ರಂಗೇರಿದ ಹಿರಿಯೂರು ಉಪಚುನಾವಣಾ ಅಖಾಡ: ಅಮಿತ್​ ಶಾ ಭೇಟಿಯಾಗಿ ರಿಪೋರ್ಟ್​ ಕೊಟ್ಟ ಬಿವೈ ವಿಜಯೇಂದ್ರ

Edited By:

Updated on: Nov 21, 2026 | 12:24 PM

ಹಿರಿಯೂರು ಉಪಚುನಾವಣಾ ಅಖಾಡ ರಂಗೇರಿದ್ದು, ಬಿಜೆಪಿಯ ಬಿ.ವೈ. ವಿಜಯೇಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಗ್ರೌಂಡ್ ರಿಪೋರ್ಟ್ ಸಲ್ಲಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಕಾಂಗ್ರೆಸ್ ಕೂಡ ಗೆಲುವಿಗೆ ತೀವ್ರ ತಂತ್ರಗಾರಿಕೆ ನಡೆಸಿದೆ.

ನವದೆಹಲಿ, ನವೆಂಬರ್ 21: ಹಿರಿಯೂರು ಉಪಚುನಾವಣಾ ಕಣ ರಂಗೇರಿದ್ದು, ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಹಿರಿಯೂರು ಉಪಚುನಾವಣೆಯ ಗ್ರೌಂಡ್ ರಿಯಾಲಿಟಿ ಬಗ್ಗೆ ವಿಸ್ತೃತ ವರದಿಯನ್ನು ಸಲ್ಲಿಸಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. ವಿಜಯೇಂದ್ರ ಅವರು ಬಿಜೆಪಿ ವೋಟ್ ಬ್ಯಾಂಕ್, ಸಿದ್ದರಾಮಯ್ಯ ಫ್ಯಾಕ್ಟರ್ ಹಾಗೂ ಗೊಲ್ಲ ಸಮುದಾಯದ ಮತಗಳ ಕುರಿತು ಅಮಿತ್ ಶಾ ಅವರಿಗೆ ವಿವರಣೆ ನೀಡಿದ್ದಾರೆ.

ಮತ್ತೊಂದೆಡೆ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೇ ಅಥವಾ ಬಿಜೆಪಿಯೇ ಸ್ಪರ್ಧಿಸಬೇಕೇ ಎಂಬ ಬಗ್ಗೆ ಲೆಕ್ಕಾಚಾರಗಳು ನಡೆಯುತ್ತಿವೆ. ವಿಜಯೇಂದ್ರ ಅವರು ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಸುವಂತೆ ಮನವಿ ಮಾಡಿದ್ದು, ಜೆಡಿಎಸ್ ಕೂಡ ತನ್ನ ಅಭ್ಯರ್ಥಿಗೆ ಅವಕಾಶ ನೀಡುವಂತೆ ಕೋರಿದೆ. ಎರಡು ದಿನ ಹಿಂದಷ್ಟೇ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಸಹ ಅಮಿತ್ ಶಾರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾದ ನಂತರವೇ ಬಿಜೆಪಿ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ಹಿರಿಯೂರು ಉಪಚುನಾವಣೆ ಇದೀಗ ಎಲ್ಲ ಪಕ್ಷಗಳಿಗೂ ಪ್ರತಿಷ್ಠೆಯ ಕಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More