AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್‌-ಬಿಜೆಪಿ ಮೈತ್ರಿ ಭಿನ್ನಾಭಿಪ್ರಾಯವಿಲ್ಲ: ಹಿರಿಯೂರು ಉಪಚುನಾವಣೆ ಟಿಕೆಟ್‌ ಕುರಿತು ಕುಮಾರಸ್ವಾಮಿ ಸ್ಪಷ್ಟನೆ

ಜೆಡಿಎಸ್‌-ಬಿಜೆಪಿ ಮೈತ್ರಿ ಭಿನ್ನಾಭಿಪ್ರಾಯವಿಲ್ಲ: ಹಿರಿಯೂರು ಉಪಚುನಾವಣೆ ಟಿಕೆಟ್‌ ಕುರಿತು ಕುಮಾರಸ್ವಾಮಿ ಸ್ಪಷ್ಟನೆ

ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Nov 16, 2026 | 1:05 PM

Share

ಹಿರಿಯೂರು ಉಪಚುನಾವಣೆ ಟಿಕೆಟ್‌ ಹಂಚಿಕೆ ವಿಚಾರವಾಗಿ ಜೆಡಿಎಸ್‌ ಮತ್ತು ಬಿಜೆಪಿ ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಬಗ್ಗೆ ಉಡುಪಿಯ ಕೊಲ್ಲೂರಿನಲ್ಲಿ ಪ್ರತಿಕ್ರಿಯಿಸಿದ ಹೆಚ್‌.ಡಿ. ಕುಮಾರಸ್ವಾಮಿ, ‘‘ನಮ್ಮ ಪಕ್ಷ ಮುಕ್ತವಾದ ತೀರ್ಮಾನಕ್ಕೆ ಸಿದ್ಧವಿದೆ. ಮೈತ್ರಿ ಮುಂದುವರಿಸುವಲ್ಲಿ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ’’ ಎಂದು ಸ್ಪಷ್ಟಪಡಿಸಿದ್ದಾರೆ.

ಉಡುಪಿ, ನವೆಂಬರ್ 16: ಹಿರಿಯೂರು ಉಪಚುನಾವಣೆ ಟಿಕೆಟ್ ಹಂಚಿಕೆ ವಿಚಾರವಾಗಿ ಜೆಡಿಎಸ್‌ ಮತ್ತು ಬಿಜೆಪಿ ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಕುರಿತು ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ‘‘ನಮ್ಮ ಪಕ್ಷ ಮುಕ್ತವಾದ ತೀರ್ಮಾನಕ್ಕೆ ಸಿದ್ಧವಿದೆ’’ ಎಂದು ಹೇಳಿದ್ದಾರೆ. ಜೆಡಿಎಸ್‌-ಬಿಜೆಪಿ ಮೈತ್ರಿ ಮುಂದುವರಿಕೆಯ ಬಗ್ಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸ್ಪಷ್ಟಪಡಿಸಿದ ಕುಮಾರಸ್ವಾಮಿ, ಮೈತ್ರಿಯಲ್ಲಿ ಯಾವುದೇ ಭಿನ್ನಾಭಿಪ್ರಾಯ ಬರಬಾರದು ಎಂಬುದು ತಮ್ಮ ಆದ್ಯತೆ ಎಂದರು.

ಹಿರಿಯೂರು ಕ್ಷೇತ್ರವನ್ನು ಸ್ವಾತಂತ್ರ್ಯ ನಂತರ ಜನತಾದಳ ಮತ್ತು ಕಾಂಗ್ರೆಸ್ ಪಕ್ಷದ ನಡುವಿನ ಹೋರಾಟದ ಕಣ ಎಂದು ಅವರು ನೆನಪಿಸಿಕೊಂಡರು. 2013ರ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಕೃಷ್ಣಪ್ಪ ಅವರು 73,000 ಮತಗಳನ್ನು ಪಡೆದು ಕೇವಲ 1200 ಮತಗಳಿಂದ ಸೋತಿದ್ದನ್ನು ಉಲ್ಲೇಖಿಸಿದರು. ಬಿಜೆಪಿ ಸ್ನೇಹಿತರೂ ಸಹ ಈ ಕ್ಷೇತ್ರದಲ್ಲಿ ಸ್ಪರ್ಧಿಸಲು ಆಸೆ ಹೊಂದಿದ್ದಾರೆ ಎಂಬುದನ್ನು ಕುಮಾರಸ್ವಾಮಿ ಒಪ್ಪಿಕೊಂಡರು. ಆದರೆ, ಎನ್​ಡಿಎ ಮೈತ್ರಿಯಲ್ಲಿ ಯಾವುದೇ ಅಪಸ್ವರ ಬರಬಾರದು ಎಂಬುದು ತಮ್ಮ ಪಕ್ಷದ ಆದ್ಯತೆಯಾಗಿದ್ದು, ಪ್ರಧಾನ ಮಂತ್ರಿಗಳು ಮತ್ತು ಕೇಂದ್ರದ ಹಿರಿಯರ ನಿರ್ಧಾರದಂತೆ ಮೈತ್ರಿ ಗೌರವಯುತವಾಗಿ ಮುಂದುವರಿಯಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜ್ವಲ್ ಅಮೀನ್​, ಉಡುಪಿ
ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More