ಬರ ನಿರ್ವಹಣೆ ಬಗ್ಗೆ ಅಸಮಾಧಾನ: ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ವ್ಯಂಗ್ಯ

Edited By:

Updated on: Sep 21, 2026 | 1:18 PM

ಕಾಂಗ್ರೆಸ್ ಶಾಸಕ ಹೆಚ್.ಕೆ. ಪಾಟೀಲ್ ರಾಜ್ಯದ ಬರ ಪರಿಸ್ಥಿತಿ ಕುರಿತು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಸ್ವಪಕ್ಷದ ಶಾಸಕರೇ ಸರ್ಕಾರವನ್ನು ಪ್ರಶ್ನಿಸುತ್ತಿರುವುದನ್ನು ಉಲ್ಲೇಖಿಸಿ ಜೆಡಿಎಸ್ ಕಾಂಗ್ರೆಸ್ ಆಡಳಿತದ ವಿರುದ್ಧ ವ್ಯಂಗ್ಯವಾಡಿದೆ. ಮುಖ್ಯಮಂತ್ರಿಗಳ ಆದೇಶಕ್ಕೆ ಬೆಲೆಯೇ ಇಲ್ಲ, ಅಧಿಕಾರಿಗಳು ಮಾತನ್ನು ಧಿಕ್ಕರಿಸುತ್ತಿದ್ದಾರೆ ಎಂದು ಜೆಡಿಎಸ್ ಹೇಳಿದ್ದು, ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯ ಆಡಳಿತಕ್ಕೆ ಇದು ಸಾಕ್ಷಿ ಎಂದಿದೆ.

ಬೆಂಗಳೂರು, ಸೆಪ್ಟೆಂಬರ್​​ 21: ಹಿರಿಯ ಶಾಸಕ ಹೆಚ್.ಕೆ. ಪಾಟೀಲ್ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು, ಬರ ನಿರ್ವಹಣೆ ಕುರಿತು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಪತ್ರವನ್ನು ಅಸ್ತ್ರವನ್ನಾಗಿ ಬಳಸಿಕೊಂಡಿರುವ ಜೆಡಿಎಸ್, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಗದಗ ಕ್ಷೇತ್ರದ ಹಿರಿಯ ಶಾಸಕರಾದ ಹೆಚ್.ಕೆ. ಪಾಟೀಲ್ ಅವರು ರಾಜ್ಯದ ಬರ ಪರಿಸ್ಥಿತಿಯ ಗಂಭೀರತೆಯನ್ನು ಎತ್ತಿ ತೋರಿಸಿರುವುದು ಕಾಂಗ್ರೆಸ್​​ ಸರ್ಕಾರದ ನಿಷ್ಕ್ರಿಯ ಆಡಳಿತಕ್ಕೆ ಸಾಕ್ಷಿ. ಮುಖ್ಯಮಂತ್ರಿಗಳ ಆದೇಶಕ್ಕೆ ಬೆಲೆಯೇ ಇಲ್ಲ, ಅಧಿಕಾರಿಗಳು ನಿಮ್ಮ ಮಾತನ್ನು ಧಿಕ್ಕರಿಸುತ್ತಿದ್ದಾರೆ ಎಂದು ಪತ್ರ ಬರೆದು ಅಳಲು ತೋಡಿಕೊಂಡಿದ್ದಾರೆ. ಮುಖ್ಯಮಂತ್ರಿಗಳೇ, ಸರ್ಕಾರವನ್ನು ನೀವು ನಡೆಸುತ್ತಿದ್ದೀರೋ ಅಥವಾ ಎಸಿ ರೂಮಿನಲ್ಲಿ ಕುಳಿತಿರುವ ಅಧಿಕಾರಿಗಳೋ? ಸರ್ಕಾರದ ಆಡಳಿತ ಯಂತ್ರಕ್ಕೂ ಮಳೆಮಾಪನ ಯಂತ್ರದಂತೆ ಅನಾರೋಗ್ಯ ಕಾಡುತ್ತಿದೆಯೇ? ಎಂದು ಜೆಡಿಎಸ್​​ ಪ್ರಶ್ನಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Sep 21, 2026 01:17 PM
Loading...
Unable to load recommendations.
Follow Us