ಬಿಜೆಪಿ-ಜೆಡಿಎಸ್ ನಾಯಕರ ಸಭೆಗೆ ಆಗಮಿಸಿದ ಅಮಿತ್ ಶಾ, ಕುಮಾರಸ್ವಾಮಿಯ ಕೈಕುಲುಕಿ ಆರೋಗ್ಯ ಹೇಗಿದೆ ಎಂದರು

ಬಿಜೆಪಿ-ಜೆಡಿಎಸ್ ನಾಯಕರ ಸಭೆಗೆ ಆಗಮಿಸಿದ ಅಮಿತ್ ಶಾ, ಕುಮಾರಸ್ವಾಮಿಯ ಕೈಕುಲುಕಿ ಆರೋಗ್ಯ ಹೇಗಿದೆ ಎಂದರು

ಅರುಣ್​ ಕುಮಾರ್​ ಬೆಳ್ಳಿ
|

Updated on:Apr 02, 2024 | 12:55 PM

ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ ಕೆ ಸುಧಾಕರ್ ಸಹ ಭಾಗಿಯಾಗಿದ್ದರು.

ಬೆಂಗಳೂರು: ಚುನಾವಣೆ ಮತ್ತು ಇತರ ಸಂದಿಗ್ಧ ಸಂದರ್ಭಗಳಲ್ಲಿ ಬಿಜೆಪಿಯ ಚಾಣಕ್ಯ ಎಂದು ಗುರುತಿಸಿಕೊಳ್ಳುವ ಗೃಹ ಸಚಿವ ಅಮಿತ್ ಶಾ (Amit Shah) ಬೆಂಗಳೂರಿಗೆ ಅಗಮಿಸಿದ್ದು ನಗರದ ಖಾಸಗಿ ಹೋಟೆಲೊಂದರಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಸಭೆಯಲ್ಲಿ ಅವರು ಪಾಲ್ಗೊಳ್ಳಲು ಬಂದಾಗ ಎರಡೂ ಪಕ್ಷಗಳ ನಾಯಕರು ಅವರನ್ನು ಸ್ವಾಗತಿಸಿದರು. ಧೃಶ್ಯಗಳಲ್ಲಿ ಕಾಣುವ ಹಾಗೆ ಹೋಟೆಲ್​ನ ವಾಹನವೊಂದರಿಂದ ಇಳಿಯುತ್ತಿದ್ದಂತೆಯೇ ಅಮಿತ್ ಶಾ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿಯವರ (HD Kumaraswamy) ಕೈಕುಲುಕಿ ಅವರ ಆರೋಗ್ಯದ ಬಗ್ಗೆ ವಿಚಾರಿಸುತ್ತಾರೆ. ವಿಡಿಯೋದಲ್ಲಿ ಕುಮಾರಸ್ವಾಮಿಯವರಲ್ಲದೆ, ಆರ್ ಆಶೋಕ (R Ashoka), ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಚಿವ ಡಿವಿ ಸದಾನಂದಗೌಡ, ಜೆಡಿಎಸ್ ನಾಯಕ ಬಂಡೆಪ್ಪ ಕಾಶೆಂಪುರ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬೆಂಗಳೂರು ಕೇಂದ್ರ ಅಭ್ಯರ್ಥಿ ಪಿಸಿ ಮೋಹನ ಮೊದಲಾದವರನ್ನು ನೋಡಬಹುದು. ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ ಕೆ ಸುಧಾಕರ್ ಸಹ ಭಾಗಿಯಾಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: HD Kumaraswamy Press Meet Live: ಕುಮಾರಸ್ವಾಮಿ ಸಮ್ಮುಖದಲ್ಲಿ ಕಾಂಗ್ರೆಸ್​ನ ಮಾಜಿ ಶಾಸಕ ಜೆಡಿಎಸ್ ಸೇರ್ಪಡೆ

Published on: Apr 02, 2024 12:55 PM