AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ತೂಗುದೀಪ: ನಟನನ್ನು ಬಳ್ಳಾರಿಗೆ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಿದ್ದು ಗೊತ್ತೇ ಇಲ್ಲವೆಂದ ಗೃಹಸಚಿವ!

ದರ್ಶನ್ ತೂಗುದೀಪ: ನಟನನ್ನು ಬಳ್ಳಾರಿಗೆ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಿದ್ದು ಗೊತ್ತೇ ಇಲ್ಲವೆಂದ ಗೃಹಸಚಿವ!

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 29, 2024 | 12:18 PM

Share

ದರ್ಶನ್ ತೂಗುದೀಪ: ಜಮೀರ್ ಅಹ್ಮದ್ ಖಾನ್ ಬಳ್ಳಾರಿಯ ಉಸ್ತುವಾರಿ ಸಚಿವರಾಗಿರುವುದಕ್ಕೆ ದರ್ಶನ್ ರನ್ನು ಅಲ್ಲಿಗೆ ಶಿಫ್ಟ್ ಮಾಡಲಾಗಿದೆ ಎಂಬ ಅರೋಪವನ್ನು ಅಲ್ಲಗಳೆದ ಪರಮೇಶ್ವರ್, ಜಿಲ್ಲೆಗೊಬ್ಬ ಉಸ್ತುವಾರಿ ಸಚಿವರಿರುತ್ತಾರೆ, ಅದರಲ್ಲಿ ವಿಶೇಷತೆ ಏನು ಬಂತು ಎಂದು ಪ್ರಶ್ನಿಸಿದರು.

ಬೆಂಗಳೂರು: ದರ್ಶನ್ ಬಗ್ಗೆ ಕೇಳುತ್ತಲೇ ಕೋಪಗೊಳ್ಳುತ್ತಿದ್ದ ಇಲ್ಲವೇ ಅಸಮಾಧಾನದಿಂದ ಉತ್ತರಿಸುತ್ತಿದ್ದ ಗೃಹಸಚಿವ ಜಿ ಪರಮೇಶ್ವರ್ ಇಂದು ಫಾರ್ ಎ ಚೇಂಜ್ ಮುಗಳ್ನಗುತ್ತ ಮಾತಾಡಿದರು. ದರ್ಶನ್ ರನ್ನು ಬಳ್ಳಾರಿಗೆ ಕಳಿಸಿದ್ದು ಅವರನ್ನು ನಿರಾಳವಾಗಿಸಿರಬಹುದು. ದರ್ಶನ್ ಜೊತೆ 8-10 ಕೈದಿಗಳನ್ನು ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಕಾರಾಗೃಹಗಳಿಗೆ ವರ್ಗಾಯಿಸಲಾಗಿದೆ, ಆ ನಿರ್ಧಾರಗಳನ್ನು ಜೈಲು ಅಧಿಕಾರಿಗಳು ತೆಗೆದುಕೊಂಡಿದ್ದಾರೆಯೇ ಹೊರತು ತನ್ನ ಅಥವಾ ಸರ್ಕಾರದ ಹಸ್ತಕ್ಷೇಪವಿಲ್ಲ ಎಂದು ಪರಮೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Darshan Thoogudeepa: ಬಳ್ಳಾರಿ ಜೈಲು ಸೇರಿದ ದರ್ಶನ್​ಗೆ ಹೊಸ ಕೈದಿ ಸಂಖ್ಯೆ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.