ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಅಬ್ವರ: ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ

Edited By:

Updated on: Aug 05, 2026 | 11:42 AM

ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಹೊಗೇನಕಲ್ ಮತ್ತು ಭರಚುಕ್ಕಿ ಜಲಪಾತಗಳು ಭೋರ್ಗರೆಯುತ್ತಿವೆ. ಕಾವೇರಿ ನದಿಯ ರೌದ್ರ ನರ್ತನದಿಂದ ಜಲಪಾತಗಳು ಹಾಲು ನೊರೆಯಂತೆ ಧುಮ್ಮಿಕ್ಕುತ್ತಿದ್ದು, ಹಚ್ಚ ಹಸಿರಿನ ಪರಿಸರದಲ್ಲಿ ಅದ್ಭುತ ದೃಶ್ಯ ವೈಭವವನ್ನು ಸೃಷ್ಟಿಸಿವೆ. ಈ ಪ್ರಾಕೃತಿಕ ಸೊಬಗನ್ನು ಕಣ್ಣಾರೆ ನೋಡಲು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಚಾಮರಾಜನಗರ, ಆಗಸ್ಟ್​​ 05: ಕಾವೇರಿ ಜಲಾನಯನ ಪ್ರದೇಶದಲ್ಲಿ ಇತ್ತೀಚೆಗೆ ಸುರಿದ ನಿರಂತರ ಮಳೆಯಿಂದಾಗಿ ಕಾವೇರಿ ನದಿಯು ಮೈದುಂಬಿ ಹರಿಯುತ್ತಿದೆ. ಇದರ ಪರಿಣಾಮವಾಗಿ, ಕರ್ನಾಟಕ ಮತ್ತು ತಮಿಳುನಾಡು ಗಡಿಯಲ್ಲಿರುವ ಹೊಗೇನಕಲ್ ಜಲಪಾತ ಭೋರ್ಗರೆಯುತ್ತಿದ್ದು, ನೋಡುಗರ ಕಣ್ಮನ ಸೆಳೆಯುತ್ತಿವೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತಮಿಳುನಾಡು ಗಡಿಯಲ್ಲಿರುವ ಈ ಜಲಪಾತವು ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾಳಾಗಿ ಮಾರ್ಪಟ್ಟಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More