ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

Edited By:

Updated on: Jul 01, 2026 | 9:01 PM

ಮುಖ್ಯಾಂಶಗಳು

  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್​ ಅಲರ್ಟ್​ ಹಿನ್ನೆಲೆ
  • ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ
  • ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅವರಿಂದ ಆದೇಶ

ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆಯು ನಾಳೆ ಜಿಲ್ಲೆಯಲ್ಲಿ 'ರೆಡ್ ಅಲರ್ಟ್' (Red Alert) ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ನಾಳೆ (ಜುಲೈ 02) ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ.

ಮಂಗಳೂರು, (ಜುಲೈ 01): ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ (Dakshina Kannada) ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆಯು ನಾಳೆ ಜಿಲ್ಲೆಯಲ್ಲಿ ‘ರೆಡ್ ಅಲರ್ಟ್’ (Red Alert) ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ನಾಳೆ (ಜುಲೈ 02) ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶದಂತೆ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ (PU) ಸೇರಿದಂತೆ ಎಲ್ಲ ಕಾಲೇಜುಗಳಿಗೆ ನಾಳೆ ರಜೆ ಇರಲಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ. ಇನ್ನು ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಕರಾವಳಿ ತೀರದಲ್ಲಿ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಸಮುದ್ರ ಹಾಗೂ ನದಿ ತೀರದ ಪ್ರದೇಶಗಳಲ್ಲಿ ಗಾಳಿಯ ವೇಗವೂ ಹೆಚ್ಚಿರಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More