ನದಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್

| Updated By: ಗಂಗಾಧರ​ ಬ. ಸಾಬೋಜಿ

Updated on: Jul 26, 2024 | 5:03 PM

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ‌ ಉಪ್ಪಿನಂಗಡಿ ಬಳಿಯ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸುವೊಂದನ್ನು ಹೋಂ ಗಾರ್ಡ್ಸ್ ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ. ಸ್ಥಳೀಯರಿಂದ ಮಾಹಿತಿ ಬಂದ ತಕ್ಷಣ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹಸು ಕಾಪಾಡಲಾಗಿದೆ. ಹೋಂ ಗಾರ್ಡ್ಸ್ ಕಾರ್ಯಾಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಮಂಗಳೂರು, ಜುಲೈ 26: ಕರ್ನಾಟಕದಲ್ಲಿ ನಿರಂತರ ಮಳೆ (Rain) ಅಬ್ಬರ ಮುಂದುವರೆದಿದೆ. ಮಹಾಮಳೆಗೆ ಅವಾಂತರಗಳು ಸೃಷ್ಟಿಯಾಗುತ್ತಿವೆ. ಮನುಷ್ಯರಷ್ಟೇ ಅಲ್ಲದೆ ಪ್ರಾಣಿಗಳಿಗೂ ಮಳೆ ಸಂಕಷ್ಟ ಉಂಟುಮಾಡಿದೆ. ಉಕ್ಕಿ ಹರಿಯುತ್ತಿರುವ ನೇತ್ರಾವತಿ ನದಿಯಲ್ಲಿ ಜೀವಂತ ಹಸುವೊಂದು (Cow) ಸಿಕ್ಕಿಹಾಕಿಕೊಂಡಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹೋಂ ಗಾರ್ಡ್ಸ್ ಹಸುವನ್ನು ಕಾಪಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ‌ ಉಪ್ಪಿನಂಗಡಿ ಬಳಿಯ ನೇತ್ರಾವತಿ ನದಿಯಲ್ಲಿ ಘಟನೆ ಕಂಡುಬಂದಿದೆ. ನದಿಯಲ್ಲಿ ಹಸು ಕೊಚ್ಚಿಕೊಂಡು ಹೋಗುತ್ತಿದ್ದ ಬಗ್ಗೆ ಸ್ಥಳೀಯರಿಂದ ಮಾಹಿತಿ ನೀಡಲಾಗಿದ್ದು, ತಕ್ಷಣ ಧಾವಿಸಿದ ಉಪ್ಪಿನಂಗಡಿ ಗೃಹರಕ್ಷಕ ಪ್ರವಾಹ ರಕ್ಷಣಾ ತಂಡ ದೋಣಿಯಲ್ಲಿ ಹೋಗಿ ಹಗ್ಗ ಹಾಕಿ ಹಸು ರಕ್ಷಣೆ ಮಾಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us on