Amit Shah in Karnataka: ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬಂದ ಅಮಿತ್ ಶಾ ರಾಜ್ಯದಲ್ಲಿ ಓಡಾಡುತ್ತಿರೋದು ಒಂದು ಅತ್ಯಾಧುನಿಕ ತಂತ್ರಜ್ಞಾನದ ಹೆಲಿಕಾಪ್ಟರ್​ನಲ್ಲಿ!

ಅರುಣ್​ ಕುಮಾರ್​ ಬೆಳ್ಳಿ

Updated on: Jan 28, 2023 | 3:28 PM

ರಾಜ್ಯದಲ್ಲಿ ಅಮಿತ್ ಶಾ ಓಡಾಟಕ್ಕೆ ಬಳಸುತ್ತಿರುವ ಹೆಲಿಕಾಪ್ಟರ್ ಅನ್ನು ಅತ್ಯಾಧುನಿಕ ತಂತ್ರಜ್ಞಾನದ ಚಾಪರ್ ಎನ್ನಲಾಗಿದೆ.

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಕಳೆದ ರಾತ್ರಿಯೇ ವಿಶೇಷ ವಿಮಾನವೊಂದರಲ್ಲಿ ದೆಹಲಿಯಿಂದ ಹೊರಟು ಹುಬ್ಬಳ್ಳಿಯಲ್ಲಿ ಬಂದಿಳಿದರು. ಅವರು ನಗರದ ಖಾಸಗಿ ಹೋಟೆಲೊಂದರಲ್ಲಿ ವಾಸ್ತವ್ಯ ಹೂಡಿರುವ ಬಗ್ಗೆ ಈಗಾಗಲೇ ವರದಿ ಮಾಡಿದ್ದೇವೆ. ಶನಿವಾರ ಅವರು ಹುಬ್ಬಳ್ಳಿ, ಧಾರವಾಡ (Dharwad), ಮತ್ತು ಬೆಳಗಾವಿಯ ಕುಂದಗೋಳ್ ಮೊದಲಾದ ಕಡೆಗಳಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಗಳು ಮತ್ತು ರೋಡ್ ಶೋನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಂದಹಾಗೆ, ಅವರು ಓಡಾಟಕ್ಕೆ ಬಳಸುತ್ತಿರುವ ಹೆಲಿಕಾಪ್ಟರ್ (chopper) ಇದೇ. ಇದನ್ನು ಅತ್ಯಾಧುನಿಕ ತಂತ್ರಜ್ಞಾನದ ಚಾಪರ್ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jan 28, 2023 03:27 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.