Maha Shivratri: ಇಶಾ ಫೌಂಡೇಶನ್‌ನಲ್ಲಿ ಸದ್ಗುರು ಜೊತೆ ಶಿವರಾತ್ರಿಯಲ್ಲಿ ಅಮಿತ್ ಶಾ ಭಾಗಿ

Updated on: Feb 26, 2025 | 7:54 PM

ಮಹಾ ಶಿವರಾತ್ರಿಯಂದು ಕೊಯಮತ್ತೂರಿನಲ್ಲಿ ಸದ್ಗುರು ಜಗ್ಗಿ ವಾಸುದೇವ್ ಅವರ ಸಮ್ಮುಖದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಶಾ ಫೌಂಡೇಶನ್‌ನಲ್ಲಿ 'ಧ್ಯಾನಲಿಂಗ'ಕ್ಕೆ ಅರ್ಪಣೆ ಮಾಡಿದ್ದಾರೆ. ಕೊಯಮತ್ತೂರಿನಲ್ಲಿ ಮಹಾ ಶಿವರಾತ್ರಿ ಆಚರಣೆಗಾಗಿ ಸದ್ಗುರು ಜಗ್ಗಿ ವಾಸುದೇವ್ ಸ್ಥಾಪಿಸಿದ ಈಶಾ ಫೌಂಡೇಶನ್‌ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದಾರೆ. ಇಶಾ ಫೌಂಡೇಶನ್‌ನಲ್ಲಿ ಮಹಾ ಶಿವರಾತ್ರಿ ಆಚರಣೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದಾರೆ.

ಕೊಯಮತ್ತೂರು (ಫೆಬ್ರವರಿ 26): ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರ ಸಮ್ಮುಖದಲ್ಲಿ ಕೊಯಮತ್ತೂರಿನ ಇಶಾ ಕೇಂದ್ರದಲ್ಲಿ ನಡೆಯುತ್ತಿರುವ ಮಹಾ ಶಿವರಾತ್ರಿ ಆಚರಣೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದಾರೆ. ಈ ವೇಳೆ ಅಮಿತ್ ಶಾ ‘ಧ್ಯಾನಲಿಂಗ’ಕ್ಕೆ ಅರ್ಪಣೆ ಮಾಡಿದ್ದಾರೆ. ಇಶಾ ಯೋಗ ಕೇಂದ್ರದಲ್ಲಿ ಮಹಾ ಶಿವರಾತ್ರಿ ಆಚರಣೆಗಳು ಇಂದು ಸಂಜೆ 6 ಗಂಟೆಯಿಂದ ಫೆಬ್ರವರಿ 27ರಂದು ಬೆಳಿಗ್ಗೆ 6 ಗಂಟೆಯವರೆಗೆ ನಡೆಯಲಿವೆ. ಈ ವೇಳೆ ಅಮಿತ್ ಶಾ ಭೈರವಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹಾಗೇ, ಜಗ್ಗಿ ವಾಸುದೇವ್ ಜೊತೆ ನಾಗಪೂಜೆ ನೆರವೇರಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ