ಫೆಬ್ರುವರಿ 11 ರಂದು ಪುತ್ತೂರಿಗೆ ಆಗಮಿಸಲಿರುವ ಅಮಿತ್ ಶಾ, ಒಂದು ಲಕ್ಷ ಜನರನ್ನು ಸೇರಿಸುವ ಗುರಿ ಸ್ಥಳೀಯ ಬಿಜೆಪಿ ನಾಯಕರಿಗೆ
ಕಾರ್ಯಕ್ರಮಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಗುರಿಯನ್ನು ಕರಾವಳಿ ಭಾಗದ ಬಿಜೆಪಿ ನಾಯಕರು ಇಟ್ಟುಕೊಂಡಿದ್ದಾರೆ. ಕಾರ್ಯಕ್ರಮದ ನೆಪದಲ್ಲಿ ಮತಬೇಟೆ ನಡೆಸುವ ಯೋಜನೆ ಅವರದ್ದು.
ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಉತ್ತರ ಮತ್ತು ಮಧ್ಯ ಕರ್ನಾಟಕ ಭೇಟಿ ನೀಡಿದ್ದಾಯ್ತು. ಈಗ ಉಳಿದಿರೋದು ದಕ್ಷಿಣ ಕರ್ನಾಟಕ ಮತ್ತು ಕರಾವಳಿ ಕರ್ನಾಟಕ (coastal Karnataka). ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಪ್ರಧಾನಿಗಳಷ್ಟು ಜನಪ್ರಿಯರಲ್ಲದಿದ್ದರೂ ಒಬ್ಬ ಮಾಸ್ ಲೀಡರ್ ಆಗಿರುವುದರಿಂದ ಜನರನ್ನು ಸೆಳೆಯುತ್ತಾರೆ. ಮಂಗಳೂರಿನ ಪುತ್ತೂರಿನಲ್ಲಿ ಫೆಬ್ರವರಿ 11 ರಂದ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಸಮಾರಂಭ ಜರುಗಲಿದ್ದು ಮುಖ್ಯ ಅತಿಥಿಗಳಾಗಿ ಅಮಿತ್ ಶಾ ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಗುರಿಯನ್ನು ಕರಾವಳಿ ಭಾಗದ ಬಿಜೆಪಿ ನಾಯಕರು ಇಟ್ಟುಕೊಂಡಿದ್ದಾರೆ. ಕಾರ್ಯಕ್ರಮದ ನೆಪದಲ್ಲಿ ಮತಬೇಟೆ ನಡೆಸುವ ಯೋಜನೆ ಅವರದ್ದು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 09, 2023 12:25 PM