ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಕೈದಿಗಳ ಅಹವಾಲುಗಳನ್ನು ಗೃಹಸಚಿವ ಆರಗ ಜ್ಞಾನೇಂದ್ರ ಆಲಿಸಿದರು

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Oct 01, 2022 | 3:03 PM

ಸನ್ನಡತೆ ಆಧಾರದಲ್ಲಿ ಬಿಡುಗಡೆಯಾಗುವ ಪ್ರಕ್ರಿಯೆ ವಿಳಂಬಗೊಳ್ಳುತ್ತಿದೆ ಎಂದು ಒಂದಿಬ್ಬರು ಕೈದಿಗಳು ಗೃಹ ಸಚಿವರ ಗಮನಕ್ಕೆ ತಂದಾಗ ತೀರ್ಪಿನ ಪ್ರತಿಯನ್ನು ಪರಿಶೀಲಿಸುವಂತೆ ಜೈಲು ಅಧಿಕಾರಿಗಳಿಗೆ ಸಚಿವರು ತಿಳಿಸಿದರು.

ಮೈಸೂರು: ನಗರದ ಕೇಂದ್ರ ಕಾರಾಗೃಹಕ್ಕೆ (central jail) ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಅವರು ಶನಿವಾರ ದಿಢೀರನೆ ಭೇಟಿ ಜೈಲಿನೊಳಗಿನ ವ್ಯವಸ್ಥೆ ಗಮನಿಸಿದರು. ಈ ಸಂದರ್ಭದಲ್ಲಿ ಕೆಲ ಕೈದಿಗಳು ತಮ್ಮ ಅಹವಾಲುಗಳನ್ನು (grievances) ಸಚಿವರಿಗೆ ಸಲ್ಲಿಸಿದರು. ಸನ್ನಡತೆ ಹಿನ್ನೆಲೆಯಲ್ಲಿ ಬಿಡುಗಡೆಯಾಗುವ ಪ್ರಕ್ರಿಯೆ ವಿಳಂಬಗೊಳ್ಳುತ್ತಿದೆ ಎಂದು ಒಂದಿಬ್ಬರು ಕೈದಿಗಳು ಗೃಹ ಸಚಿವರ ಗಮನಕ್ಕೆ ತಂದಾಗ ತೀರ್ಪಿನ ಪ್ರತಿಯನ್ನು ಪರಿಶೀಲಿಸುವಂತೆ ಜೈಲು ಅಧಿಕಾರಿಗಳಿಗೆ ಸಚಿವರು ತಿಳಿಸಿದರು. ನಮಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಸಚಿವರು ಜೈಲಿನ ಕಿಚನ್ ಗೆ ಹೋಗಿ ಊಟದ ವ್ಯವಸ್ಥೆಯನ್ನು ಸಹ ಗಮನಿಸಿದರು.