ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ ಇಲ್ಲಿದೆ

Updated By: ಅಕ್ಷಯ್​ ಪಲ್ಲಮಜಲು​​

Updated on: Aug 18, 2025 | 5:21 PM

ಧರ್ಮಸ್ಥಳ ಪ್ರಕರಣಕ್ಕೆ (Dharmasthala case) ಸಂಬಂಧಿಸಿ ಎಸ್‌ಐಟಿ ತನಿಖೆಯ ಕುರಿತ ಮಧ್ಯಂತರ ವರದಿ ಬಿಡುಗಡೆ ಮಾಡಬೇಕು ಎಂದು ವಿಪಕ್ಷ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸದನದಲ್ಲಿ ಇಂದು (ಆಗಸ್ಟ್ 18) ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಧರ್ಮಸ್ಖಳ ಪ್ರಕರಣದ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಶೋಧ ಕಾರ್ಯ ನಡೆದಿರುವ ಕಡೆ ಸಿಕ್ಕಿರುವ ಅಸ್ಥಿಪಂಜರ, ಮೂಳೆಗಳು ಸೇರಿ ಇತರ ವಸ್ತುಗಳನ್ನು ಎಫ್​ಎಸ್​ಎಲ್‌ ಪರೀಕ್ಷೆಗೆ ಕಳುಹಿಸಲಾಗಿದೆ. ಹೀಗಾಗಿ ಎಫ್​ಎಸ್​ಎಲ್‌ನಿಂದ ವರದಿ ಬರವರೆಗೆ ತಾತ್ಕಾಲಿಕವಾಗಿ ಶೋಧಕಾರ್ಯ ಸ್ಥಗಿತ ಮಾಡಲು ಎಸ್​ಐಟಿ ನಿರ್ಧಾರ ಮಾಡಿದೆ. ವರದಿ ಬಂದ ಬಳಿಕ ತನಿಖೆ ಮುಂದುವರಿಯುತ್ತದೆ ಎಂದು ಗೃಹ ಸಚಿವ ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಇನ್ನು ಈ ಪ್ರಕರಣದ ಬಗ್ಗೆ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ನೋಡಿ.

ಬೆಂಗಳೂರು, (ಆಗಸ್ಟ್ 18): ಧರ್ಮಸ್ಥಳ ಗ್ರಾಮದಲ್ಲಿ (Dharmasthala case) ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಅನಾಮಿಕನೊಬ್ಬ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಎಸ್​ಐಟಿ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ವರ್ಷಗಳ ಪ್ರಕರಣ ಇದೀಗ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲಾರಂಭಿಸಿದೆ. ಧರ್ಮಸ್ಥಳದಲ್ಲಿ ಅತ್ಯಾಚಾರ ಮಾಡಿ ಕೊಲೆ ಮಾಡಿ ಮುಚ್ಚಿಹಾಕಲಾಗಿದೆ ಎಂದು ಒಂದು ಗುಂಪಿನ ಆರೋಪವಾಗಿದ್ದರೆ, ಎಲ್ಲಾ ಸುಳ್ಳು ಧರ್ಮಸ್ಥಳ ದೇವಸ್ಥಾನದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಧರ್ಮಸ್ಥಳವನ್ನು ಸರ್ಕಾರದ ತೆಕ್ಕೆಗೆ ಕೊಡುವ ಹುನ್ನಾರ ನಡೆದಿದೆ ಎಂದು ಮತ್ತೊಂದು ಗುಂಪು ಆರೋಪಿಸಿದೆ. ಇದರ ಮಧ್ಯ ಅನಾಮಿಕ ತೋರಿಸಿದ ಸ್ಥಳಗಳಲ್ಲಿ ಎಸ್​​ಐಟಿ ಶೋಧ ಕಾರ್ಯ ನಡೆಸಿದೆ. ಆದ್ರೆ, ಇದುವರೆಗೂ ಏನೇನು ಪತ್ತೆಯಾಯ್ತು? ತನಿಖೆ ಯಾವ ಹಂತದಲ್ಲಿ ಎನ್ನುವ ಜನರಲ್ಲಿ ಪ್ರಶ್ನೆಗಳು ಉದ್ಭವಿಸಿದ್ದು, ಈ ಸಂಬಂಧ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ತನಿಖೆಯ ಕುರಿತ ಮಧ್ಯಂತರ ವರದಿ ಬಿಡುಗಡೆ ಮಾಡಬೇಕು ಎಂದು ವಿಪಕ್ಷ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸದನದಲ್ಲಿ ಇಂದು (ಆಗಸ್ಟ್ 18) ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಧರ್ಮಸ್ಖಳ ಪ್ರಕರಣದ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಶೋಧ ಕಾರ್ಯ ನಡೆದಿರುವ ಕಡೆ ಸಿಕ್ಕಿರುವ ಅಸ್ಥಿಪಂಜರ, ಮೂಳೆಗಳು ಸೇರಿ ಇತರ ವಸ್ತುಗಳನ್ನು ಎಫ್​ಎಸ್​ಎಲ್‌ ಪರೀಕ್ಷೆಗೆ ಕಳುಹಿಸಲಾಗಿದೆ. ಹೀಗಾಗಿ ಎಫ್​ಎಸ್​ಎಲ್‌ನಿಂದ ವರದಿ ಬರವರೆಗೆ ತಾತ್ಕಾಲಿಕವಾಗಿ ಶೋಧಕಾರ್ಯ ಸ್ಥಗಿತ ಮಾಡಲು ಎಸ್​ಐಟಿ ನಿರ್ಧಾರ ಮಾಡಿದೆ. ವರದಿ ಬಂದ ಬಳಿಕ ತನಿಖೆ ಮುಂದುವರಿಯುತ್ತದೆ ಎಂದು ಗೃಹ ಸಚಿವ ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಇನ್ನು ಈ ಪ್ರಕರಣದ ಬಗ್ಗೆ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ನೋಡಿ.

Published on: Aug 18, 2025 05:18 PM