ದರ್ಶನ ಜಾಮೀನು ರದ್ದು: ದಾಸನ ಮುಂದಿನ ಹಾದಿ ಏನು? ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ರದ್ದಾದ ಬೆನ್ನಲ್ಲೇ ಎ1 ಆರೋಪಿ ಪವಿತ್ರಾ ಗೌಡರನ್ನ ಬಂಧಿಸಲಾಗಿದೆ. ಬಳಿಕ ನಟ ದರ್ಶನ್ (Darshan) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಇದ್ದ ದರ್ಶನ್ ಅವರನ್ನು ಕಾಮಾಕ್ಷಿಪಾಳ್ಯಪೊಲೀಸರು ಬಂಧಿಸಿದ್ದಾರೆ. ಇನ್ನು ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು
ಬೆಂಗಳೂರು, (ಆಗಸ್ಟ್ 14): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ರದ್ದಾದ ಬೆನ್ನಲ್ಲೇ ಎ1 ಆರೋಪಿ ಪವಿತ್ರಾ ಗೌಡರನ್ನ ಬಂಧಿಸಲಾಗಿದೆ. ಬಳಿಕ ನಟ ದರ್ಶನ್ (Darshan) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಇದ್ದ ದರ್ಶನ್ ಅವರನ್ನು ಕಾಮಾಕ್ಷಿಪಾಳ್ಯಪೊಲೀಸರು ಬಂಧಿಸಿದ್ದಾರೆ. ಈ ಮೊದಲು ದರ್ಶನ್ ಅವರು ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎಂಬ ಸುದ್ದಿ ಬಂದಿತ್ತು. ಆದರೆ ಪೊಲೀಸರು ದರ್ಶನ್ ನ್ಯಾಯಾಲಯಕ್ಕೆ ಶರಣಾಗುವ ಮೊದಲೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇನ್ನು ಈ ಸಂಬಂಧ ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರತಿಕ್ರಿಯಿಸಿ, ಈ ದೇಶದಲ್ಲಿ ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಈ ನೆಲದ ಕಾನೂನನ್ನು ಎಲ್ಲರೂ ಗೌರವಿಸಬೇಕು. ಕೋರ್ಟ್ನಲ್ಲಿ ಮುಂದಿನ ಕಾನೂನು ಹೋರಾಟಕ್ಕೆ ಅವಕಾಶವಿದೆ. ಕಾನೂನಿನಲ್ಲಿ ಎಲ್ಲರಿಗೂ ಅವಕಾಶವಿದೆ. ಜೈಲು ಅಧೀಕ್ಷಕರಿಗೆ ಸೂಚನೆ ಬಂದಿರುತ್ತೆ. ಅವರು ಎಚ್ಚರಿಕೆ ವಹಿಸುತ್ತಾರೆ ಎಂದರು.

