ಅಶ್ಲೀಲ ವಿಡಿಯೋ ವೈರಲ್: ಬಂಧನ ಭೀತಿಯಿಂದ ವಿದೇಶಕ್ಕೆ ಹಾರಿದ ಪ್ರಜ್ವಲ್, ಗೃಹ ಸಚಿವ ಹೇಳಿದ್ದಿಷ್ಟು

| Updated By: ರಮೇಶ್ ಬಿ. ಜವಳಗೇರಾ

Updated on: Apr 28, 2024 | 11:40 AM

ಹಾಸನ ಲೋಕಸಭಾ ಕ್ಷೇತ್ರದ ಎನ್​ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಗೋಗಳು ವೈರಲ್ ಆಗಿವೆ. ಇದರ ಬೆನ್ನಲ್ಲೇ ಮಹಿಳಾ ಆಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ತನಿಖೆ ಮಾಡಿಸುವಂತೆ ಮನವಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದಾರೆ. ಇನ್ನು ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಏನು ಹೇಳಿದ್ದಾರೆ ಎನ್ನುವುದನ್ನು ನೋಡಿ.

ಬೆಂಗಳೂರು, (ಏಪ್ರಿಲ್ 28) : ಲೋಕಸಭಾ ಚುನಾವಣಾ (Lok Sabha Election) ಸಮಯದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ (Prajwal Revanna Scandal Case) ಭಾರೀ ಸದ್ದು ಮಾಡುತ್ತಿದೆ. ಇದೀಗ ಈ ಪ್ರಕರಣ ತನಿಖೆ ಮಾಡಲು ರಾಜ್ಯ ಸರ್ಕಾರ ಎಸ್​ಐಟಿ ರಚನೆ ಮಾಡಲು ತೀರ್ಮಾನಿಸಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ. ಇದರ ಬೆನ್ನಲ್ಲೇ ಪ್ರಜ್ವಲ್​ ರೇವಣ್ಣ ಅವರು ವಿದೇಶಕ್ಕೆ ಹಾರಿದ್ದಾರೆ ಎಂದು ತಿಳಿದುಬಂದಿದೆ. ಶನಿವಾರ ಬೆಳಗ್ಗೆ 3:15ಕ್ಕೆ ಬೆಂಗಳೂರಿನಿಂದ ಜರ್ಮನಿಯ (Germany) ಫ್ರಂಕ್‌ಫರ್ಟ್‌ಗೆ ತೆರಳಿದ ಮಾಹಿತಿ ಲಭ್ಯವಾಗಿದೆ. ಇನ್ನು ಈ ಪ್ರಕರಣದ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 28, 2024 11:38 AM