ಅಶ್ವಿನಿ ಪುನೀತ್ ಬಗ್ಗೆ ಅವಹೇಳನಕಾರಿ ಪೋಸ್ಟ್: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ
ಪುನೀತ್ ರಾಜ್ಕುಮಾರ್ ಅಭಿಮಾನಿಗಳು ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿ ಜಿ. ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಅವಹೇಳನಕಾರಿ ಪೋಸ್ಟ್ ಮಾಡಿದವರನ್ನು ಆದಷ್ಟು ಬೇಗ ಸೈಬರ್ ಇಲಾಖೆಯ ಮೂಲಕ ಪತ್ತೆ ಹಚ್ಚುತ್ತೇವೆ. ಕಾನೂನಿನ ಕ್ರಮ ತೆಗೆದುಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಇಂದೇ ನಾನು ಸೂಚನೆ ನೀಡುತ್ತೇನೆ’ ಎಂದು ಪರಮೇಶ್ವರ್ ಹೇಳಿದ್ದಾರೆ.
ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ (Ashwini Puneeth Rajkumar) ಅವರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಲವು ಕಿಡಿಗೇಡಿಗಳು ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವುದು ವಿವಾದಕ್ಕೆ ಕಾರಣ ಆಗಿದೆ. ಇದು ಫ್ಯಾನ್ಸ್ ವಾರ್ ರೀತಿ ಏರ್ಪಟ್ಟಿದೆ. ಪುನೀತ್ ರಾಜ್ಕುಮಾರ್ ಅವರ ಅಭಿಮಾನಿಗಳು (Puneeth Rajkumar Fans) ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ರೀತಿ ಕೆಟ್ಟದಾಗಿ ಪೋಸ್ಟ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಪುನೀತ್ ಫ್ಯಾನ್ಸ್ ದೂರು ನೀಡಿದ್ದಾರೆ. ಅಭಿಮಾನಿಗಳ ದೂರು ಸ್ವೀಕರಿಸಿದ ಬಳಿಕ ಜಿ. ಪರಮೇಶ್ವರ್ (G Parameshwar) ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಅವಹೇಳನಕಾರಿ ಪೋಸ್ಟ್ ಮಾಡಿದವರನ್ನು ಆದಷ್ಟು ಬೇಗ ಸೈಬರ್ ಇಲಾಖೆಯ ಮೂಲಕ ಪತ್ತೆ ಹಚ್ಚಿ, ಕಾನೂನಿನ ಕ್ರಮ ತೆಗೆದುಕೊಳ್ಳಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ನಾನು ಸೂಚನೆ ನೀಡುತ್ತೇನೆ. ಇಂಥ ಕೃತ್ಯ ಮಾಡಿದ ಕಿಡಿಗೇಡಿಗಳನ್ನು ಕಾನೂನಿನ ಚೌಕಟ್ಟಿಗೆ ತರುವ ಕೆಲಸವನ್ನು ಶೀಘ್ರದಲ್ಲೇ ಮಾಡುತ್ತೇನೆ’ ಎಂದು ಜಿ. ಪರಮೇಶ್ವರ್ ಹೇಳಿದ್ದಾರೆ. ಬೇರೆ ನಟರ ಅಭಿಮಾನಿಗಳ ಹೆಸರಿನಲ್ಲಿ ಸೋಶಿಯಲ್ ಮೀಡಿಯಾ ಖಾತೆಗಳನ್ನು ತೆರೆದ ಕಿಡಿಗೇಡಿಗಳು ಕೆಟ್ಟ ಪೋಸ್ಟ್ಗಳನ್ನು ಮಾಡಿದ್ದಾರೆ. ಇಂಥ ಕೆಲಸ ಮಾಡಿದವರಿಗೆ ಆದಷ್ಟು ಬೇಗ ತಕ್ಕ ಶಿಕ್ಷೆ ಆಗಬೇಕು ಎಂದು ಡಾ. ರಾಜ್ಕುಮಾರ್ ಕುಟುಂಬದ ಅಭಿಮಾನಿಗಳು ಒತ್ತಾಯಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.