ಹುಬ್ಬಳ್ಳಿ ಯುವತಿ ಸಾವು ಲವ್ ಜಿಹಾದ್ ಪ್ರಕರಣವಲ್ಲ, ಅವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು: ಜಿ ಪರಮೇಶ್ವರ, ಗೃಹ ಸಚಿವ

|

Updated on: Apr 19, 2024 | 12:26 PM

ವಿರೋಧ ಪಕ್ಷದ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸುತ್ತಿರುವುದಕ್ಕೆ ಉತ್ತರ ನೀಡಿದ ಅವರು, ಪ್ರತಿಯೊಂದು ವಿಷಯಕ್ಕೆ ಸರ್ಕಾರವನ್ನು ದೂರುವುದು ಬಿಜೆಪಿ ನಾಯಕರಿಗೆ ಅಭ್ಯಾಸವಾಬಿಟ್ಟಿದೆ. ಅದರಲ್ಲೂ ಈಗ ಚುನಾವಣಾ ಸಮಯವಾಗಿರುವುದರಿಂದ ಇಂಥ ಸೂಕ್ಷ್ಮಸಂವೇದಿ ಸಂಗತಿಗಳನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು ಎಂದು ಪರಮೇಶ್ವರ್ ಹೇಳಿದರು.

ತುಮಕೂರು: ಹುಬ್ಬಳ್ಳಿಯ ಕಾಲೇಜೊಂದರ ಆವರಣದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ (Niranjan Hiremath) ಅವರ ಮಗಳು ನೇಹಾ ಹಿರೇಮಠ (Neha Hiremath) ಹತ್ಯೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್ (G Parameshwar) ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಪರಮೇಶ್ವರ್, ಪ್ರಕರಣದಲ್ಲಿ ಲವ್ ಜಿಹಾದ್ ಅಂಶವನ್ನು ತಳ್ಳಿ ಹಾಕಿದರು. ತಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ಯುವಕ ಮತ್ತು ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಅದರೆ ಯುವತಿ ತನ್ನಿಂದ ದೂರಾವಾಗುತ್ತ್ತಿರುವುದು ಗೊತ್ತಾದ ಬಳಿಕ ಯುವಕ ಆಕೆಯ ಹತ್ಯೆ ಮಾಡಿದ್ದಾನೆ ಎಂದು ಪರಮೇಶ್ವರ್ ಹೇಳಿದರು. ವಿರೋಧ ಪಕ್ಷದ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸುತ್ತಿರುವುದಕ್ಕೆ ಉತ್ತರ ನೀಡಿದ ಅವರು, ಪ್ರತಿಯೊಂದು ವಿಷಯಕ್ಕೆ ಸರ್ಕಾರವನ್ನು ದೂರುವುದು ಬಿಜೆಪಿ ನಾಯಕರಿಗೆ ಅಭ್ಯಾಸವಾಬಿಟ್ಟಿದೆ. ಅದರಲ್ಲೂ ಈಗ ಚುನಾವಣಾ ಸಮಯವಾಗಿರುವುದರಿಂದ ಇಂಥ ಸೂಕ್ಷ್ಮಸಂವೇದಿ ಸಂಗತಿಗಳನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು ಎಂದು ಪರಮೇಶ್ವರ್ ಹೇಳಿದರು. ಪೊಲೀಸರು ಈಗಾಗಲೇ ಆರೋಪಿಯನ್ನು ಬಂಧಿಸಿದ್ದಾರೆ, ಅವನ ವಿರುದ್ಧಾ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಬೊಮ್ಮಾಯಿ, ಮುತಾಲಿಕ್​ ವಾಗ್ದಾಳಿ