ಕಬ್ಬು ಬೆಳೆಗಾರರ ಪ್ರತಿಭಟನೆ ವೇಲೆ ಕೆಲ ಕಿಡಿಗೇಡಿಗಳಿಂದ ಪೊಲೀಸರ ಮೇಲೆ ಕಲ್ಲು ತೂರಾಟ, ಗೃಹ ಸಚಿವ ಹೇಳಿದ್ದೇನು?

Updated on: Nov 07, 2025 | 5:04 PM

ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂ ಪಡೆದುಕೊಂಡಿದೆ. ಜಿಲ್ಲೆಯ ಹತ್ತರಗಿ ಟೋಲ್‌ ಬಳಿ ರೈತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿರುವ ವೇಳೆ ಕೆಲ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಈ ವೇಳೆ ಕೆಲ ವಾಹನಗಳ ಗಾಜು ಪುಡಿ ಪುಡಿಯಾಗಿದ್ದು, ಕೆಲ ಪೊಲೀಸರಿಗೆ ಗಾಯಗಳಾಗಿವೆ. ಅಲ್ಲದೇ ಡಿವೈಎಸ್ಪಿಯೊಬ್ಬರ ಕೈ ಮುರಿದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಸದ್ಯ ಪೊಲಿಸರು ಯಾವುದೇ ಲಾಠಿಚಾರ್ಜ್ ಮಾಡಿಲ್ಲ. ರೈತರ ಜೊತೆ ಸಮ್ಯಮದಿಂದ ಇರುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದರು.

ತುಮಕೂರು, (ನವೆಂಬರ್ 07): ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂ ಪಡೆದುಕೊಂಡಿದೆ. ಜಿಲ್ಲೆಯ ಹತ್ತರಗಿ ಟೋಲ್‌ ಬಳಿ ರೈತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿರುವ ವೇಳೆ ಕೆಲ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಈ ವೇಳೆ ಕೆಲ ವಾಹನಗಳ ಗಾಜು ಪುಡಿ ಪುಡಿಯಾಗಿದ್ದು, ಕೆಲ ಪೊಲೀಸರಿಗೆ ಗಾಯಗಳಾಗಿವೆ. ಅಲ್ಲದೇ ಡಿವೈಎಸ್ಪಿಯೊಬ್ಬರ ಕೈ ಮುರಿದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರೈತರು ಕಲ್ಲು ತೂರಾಟ ಮಾಡಿಲ್ಲ. ಯಾರೋ ಕಿಡಿಗೇಡಿಗಳು ಪೊಲೀಸರ ಮೇಲೆ ಕಲ್ಲು ಎಸೆದು ರೈತರ ಪ್ರತಿಭಟನೆ ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದಾರೆ ಎಂದು ಮುಖಂಡರು ಸ್ಪಷ್ಟಪಡಿಸಿದ್ದಾರೆ. ಇನ್ನು ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಸದ್ಯ ಪೊಲಿಸರು ಯಾವುದೇ ಲಾಠಿಚಾರ್ಜ್ ಮಾಡಿಲ್ಲ. ರೈತರ ಜೊತೆ ಸಮ್ಯಮದಿಂದ ಇರುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದರು.

Published on: Nov 07, 2025 05:03 PM