ಯುವತಿಗೆ ಲೈಂಗಿಕ ದೌರ್ಜನ್ಯ: ದೊಡ್ಡ ನಗರದಲ್ಲಿ ಇಂತಹ ಘಟನೆಗಳು ಆಗುತ್ತವೆ ಎಂದ ಪರಮೇಶ್ವರ
ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ ಯುವತಿ ಮೇಲೆ ನಡೆದ ದೌರ್ಜನ್ಯ ಪ್ರಕರಣದ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ನೀಡಿದ ಹೇಳಿಕೆ ಟೀಕೆಗೆ ಗುರಿಯಾಗಿದೆ. "ದೊಡ್ಡ ನಗರಗಳಲ್ಲಿ ಇಂತಹ ಘಟನೆಗಳು ಸಾಮಾನ್ಯ" ಎಂಬ ಅವರ ಹೇಳಿಕೆ ಭಾರೀ ಟೀಕೆಗೆ ಒಳಗಾಗಿದೆ. ಪೊಲೀಸ್ ಕಮಿಷನರ್‌ಗೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಘಟನೆಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.
ಬೆಂಗಳೂರು, ಏಪ್ರಿಲ್ 07: ನಗರದ ಬಿಟಿಎಮ್ ಲೇಔಟ್‌ನಲ್ಲಿ ಯುವತಿ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್ (G. Parameshwara) ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. “ಇಂತಹ ದೊಡ್ಡ ಸಿಟಿಯಲ್ಲಿ ಅಲ್ಲಿ ಇಲ್ಲಿ ಇಂತಹ ಘಟನೆಗಳು ಆಗುತ್ತವೆ” ಎನ್ನುವ ಮೂಲಕ ಉಡಾಫೆ ಹೇಳಿಕೆ ನೀಡಿದ್ದಾರೆ. “ನಿತ್ಯವೂ ಪೊಲೀಸ್ ಕಮಿಷನರ್ ಎಚ್ಚರಿಕೆಯಿಂದ ಇರಬೇಕು. ಬೀಟ್ ವ್ಯವಸ್ಥೆ ಚೆನ್ನಾಗಿ ಆಗಬೇಕು ಅಂತ ನಾನು ಹೇಳುತ್ತೇನೆ. ಪ್ರತಿ ಏರಿಯಾ ಮಾನಿಟರ್ ಮಾಡಬೇಕು ಎಂದು ಹೇಳಿದ್ದೇನೆ. ನಿತ್ಯ ಸೂಚನೆ ಕೊಟ್ರೂ ಅಲ್ಲೊಂದು ಇಲ್ಲೊಂದು ಘಟನೆ ಆಗುತ್ತೆ. ಅಷ್ಟಕ್ಕೆ ನಾವು ಬಿಡಲ್ಲ, ಇಲಾಖೆ ನಿರಂತರವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಬೆಂಗಳೂರು ಶಾಂತವಾಗಿ ಇದೆ. ಬೀಟ್ ವ್ಯವಸ್ಥೆ ಮತ್ತಷ್ಟು ಪರಿಣಾಮವಾಗಿ ಮಾಡುವಂತೆ ಇವತ್ತು ಕೂಡ ನಾನು ಕಮಿಷನರ್‌ಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ: ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ಅನುಚಿತ ವರ್ತನೆ, ಕೃತ್ಯದ ವಿಡಿಯೋ ವೈರಲ್

ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ

Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!

ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್

ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
