Jain monk’s murder; ನಮ್ಮ ಪೊಲೀಸರು ಸಮರ್ಥರಾಗಿದ್ದಾರೆ, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವ ಅಗತ್ಯವಿಲ್ಲ: ಡಾ ಜಿ ಪರಮೇಶ್ವರ

Jain monk’s murder; ನಮ್ಮ ಪೊಲೀಸರು ಸಮರ್ಥರಾಗಿದ್ದಾರೆ, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವ ಅಗತ್ಯವಿಲ್ಲ: ಡಾ ಜಿ ಪರಮೇಶ್ವರ

ಅರುಣ್​ ಕುಮಾರ್​ ಬೆಳ್ಳಿ
|

Updated on: Jul 10, 2023 | 11:20 AM

ಜೈನ ಸಮುದಾಯದವರು ಉಪವಾಸ ಧರಣಿ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ ಮತ್ತು ಬಿಜೆಪಿ ಸಿಬಿಐ ತನಿಖೆಗೆ ಒತ್ತಾಯಿಸುತ್ತಿದೆ.

ಹುಬ್ಬಳ್ಳಿ: ಕಾಣೆಯಾಗಿದ್ದ ಜೈನಮುನಿ ಕಾಮಕುಮಾರನಂದಿ ಮಹಾರಾಜ (Kamakumara Nandi Maharaj) ಶವವಾಗಿ ಪತ್ತೆಯಾದ ಬಳಿಕ ಕೇವಲ ಜೈನ ಸಮುದಾಯ (Jain community) ಮಾತ್ರವಲ್ಲ, ಇಡೀ ರಾಜ್ಯದ ಜನತೆ ದಿಗ್ಭ್ರಮೆಗೊಳಗಾಗಿದೆ. ಅವರನ್ನು ಕೊಲೆ ಮಾಡಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (CBI) ಒಪ್ಪಿಸಬೇಕೆಂಬ ಆಗ್ರಹ ಬಿಜೆಪಿಯಿಂದ ಹೆಚ್ಚಾಗುತ್ತಿದೆ ಮತ್ತು ಸಮುದಾಯದವರು ಉಪವಾಸ ಧರಣಿ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಇದೇ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ ಪರಮೇಶ್ವರ (G Parameshwara) ಅವರು ತನಿಖೆ ಮತ್ತಷ್ಟು ಚುರುಕುಗೊಳಿಸಲು ಹುಬ್ಬಳ್ಳಿಗೆ ತೆರಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಅವರು ಸಿಬಿಐ ತನಿಖೆಯ ಜರೂರತ್ತಿಲ್ಲ, ನಮ್ಮ ಪೊಲೀಸ್ ವ್ಯವಸ್ಥೆ ಅತ್ಯಂತ ಸಮರ್ಥವಾಗಿದೆ ಮತ್ತು ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ