ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್ ಗರಂ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಲಭ್ಯವಾಗುತ್ತಿರುವುದರ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಫುಲ್ ಗರಂ ಆಗಿದ್ದಾರೆ. ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಗೊಳಿಸುವುದಾಗಿ ತಿಳಿಸಿರುವ ಅವರು, ಘಟನೆ ಸಂಬಂಧ ಎಡಿಜಿಪಿ ದಯಾನಂದ್ ಜೊತೆ ಮಾತನಾಡಿದ್ದೇನೆ. ಪ್ರಕರಣವನ್ನು ನಾನು ಗಂಭೀರವಾಗಿ ತೆಗೆದುಕೊಂಡಿದ್ದು, ಪೊಲೀಸ್ ಅಧಿಕಾರಿಗಳ ಸಭೆ ಕರೆಯುತ್ತೇನೆ ಎಂದು ತಿಳಿಸಿದ್ದಾರೆ.
ಬೆಂಗಳೂರು, ನವೆಂಬರ್ 09: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ಸಂಬಂಧ ಪೊಲೀಸ್ ಅಧಿಕಾರಿಗಳ ವಿರುದ್ಧ ಗೃಹ ಸಚಿವ ಪರಮೇಶ್ವರ್ ಗರಂ ಆಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಇಂತಹದ್ದನ್ನೆಲ್ಲ ಸಹಿಸಿಕೊಳ್ಳಲು ಆಗಲ್ಲ. ತಪ್ಪಿತಸ್ಥರನ್ನು ಸಸ್ಪೆಂಡ್ ಮಾಡಿ ಕ್ರಮ ಕೈಗೊಳ್ಳಲಿದ್ದು, ಘಟನೆ ಸಂಬಂಧ ಎಡಿಜಿಪಿ ದಯಾನಂದ್ ಜೊತೆ ಮಾತನಾಡಿದ್ದೇನೆ. ಪ್ರಕರಣವನ್ನು ನಾನು ಗಂಭೀರವಾಗಿ ತೆಗೆದುಕೊಂಡಿದ್ದು, ಪೊಲೀಸ್ ಅಧಿಕಾರಿಗಳ ಸಭೆ ಕರೆಯುತ್ತೇನೆ ಎಂದು ಗೃಹ ಸಚಿವರು ಹೇಳಿದ್ದಾರೆ. ಅಲ್ಲದೆ, ಈ ಬಗ್ಗೆ ತನಿಖೆ ಮಾಡಿ ವರದಿ ಕೊಡಿ ಅಂತಾ ದಯಾನಂದ್ಗೆ ಹೇಳಿದ್ದೇನೆ. ಪೊಲೀಸ್ ವರದಿ ಸಮಾಧಾನ ತರದಿದ್ರೆ ಸಮಿತಿ ಮಾಡಿ ತನಿಖೆ ಮಾಡಲಾಗುತ್ತೆ. ಉಗ್ರ ಆಗಲಿ ಯಾರೇ ಆಗಲಿ ಜೈಲಿನಲ್ಲಿ ಕೈದಿಗಳಿಗೆ ಫೋನ್ ಕೊಡುವ ಹಾಗೆ ಇಲ್ಲ. ಹೀಗಿರುವಾಗ ಪದೇ ಪದೆ ಈ ರೀತಿ ಯಾಕೆ ಆಗ್ತಿದೆ ಅಂತಾ ಪ್ರಶ್ನಿಸಿದ್ದೇನೆ ಎಂದು ಅವರು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
