ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಬೆಂಗಳೂರಿನ ಜೆಜೆ ನಗರದಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಇಬ್ಬರು ಯುವತಿಯರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿತ್ತು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹಸಚಿವ ಜಿ. ಪರಮೇಶ್ವರ್, ಬಂಧಿತರು 15 ಮತ್ತು 16 ವರ್ಷದ ಅಪ್ರಾಪ್ತ ವಯಸ್ಸಿನವರು. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಕಾನೂನು ಪ್ರಕಾರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಅವರು ಅಪ್ರಾಪ್ತರಾಗಿರುವುದರಿಂದ, ಜುವೆನೈಲ್ ನಿಯಮಗಳ ಅಡಿಯಲ್ಲಿ ಪ್ರಕರಣವನ್ನು ನಿರ್ವಹಿಸಲಾಗುವುದು. ಯಾರು ಈ ಬಾಲಕರನ್ನು ಪ್ರಚೋದಿಸಿದ್ದಾರೆ ಅಥವಾ ಘಟನೆ ಹೇಗೆ ನಡೆಯಿತು ಎಂಬುದರ ಕುರಿತು ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು, ಜನವರಿ 05: ಬೆಂಗಳೂರಿನ ಜೆಜೆ ನಗರದಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಇಬ್ಬರು ಯುವತಿಯರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿತ್ತು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹಸಚಿವ ಜಿ. ಪರಮೇಶ್ವರ್, ಬಂಧಿತರು 15 ಮತ್ತು 16 ವರ್ಷದ ಅಪ್ರಾಪ್ತ ವಯಸ್ಸಿನವರು. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಕಾನೂನು ಪ್ರಕಾರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಅವರು ಅಪ್ರಾಪ್ತರಾಗಿರುವುದರಿಂದ, ಜುವೆನೈಲ್ ನಿಯಮಗಳ ಅಡಿಯಲ್ಲಿ ಪ್ರಕರಣವನ್ನು ನಿರ್ವಹಿಸಲಾಗುವುದು. ಯಾರು ಈ ಬಾಲಕರನ್ನು ಪ್ರಚೋದಿಸಿದ್ದಾರೆ ಅಥವಾ ಘಟನೆ ಹೇಗೆ ನಡೆಯಿತು ಎಂಬುದರ ಕುರಿತು ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಇಂತಹ ಘಟನೆಗಳು ನಡೆದಾಗ ಬಿಜೆಪಿ ರಾಜಕೀಯ ಮಾಡಲು ಪ್ರಯತ್ನಿಸುತ್ತದೆ ಎಂಬ ಆರೋಪವನ್ನು ಮಾಡಿರುವ ಪರಮೇಶ್ವರ್, ಬಿಜೆಪಿ ಹೇಳಿಕೆ ನೀಡುವ ಮೊದಲೇ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗಿದೆ. ಕಾನೂನು ತನ್ನದೇ ಆದ ರೀತಿಯಲ್ಲಿ ಕೆಲಸ ಮಾಡುತ್ತದೆ ಮತ್ತು ಯಾರ ಪ್ರಚೋದನೆಗೂ ಒಳಗಾಗುವುದಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
