Video: ಭಾರತಕ್ಕೆ ಬಂದಿಳಿದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ, ಸಚಿವರಿಂದ ಸ್ವಾಗತ
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಭಾನುವಾರ ಮುಂಜಾನೆ ಅಮೆರಿಕದಿಂದ ಭಾರತಕ್ಕೆ ಬಂದಿಳಿದಿದ್ದಾರೆ.ನವದೆಹಲಿ ವಿಮಾನ ನಿಲ್ದಾಣ ತಲುಪಿದ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ವಿದ್ಯಾರ್ಥಿಗಳ ಗುಂಪು ಶುಭಾಂಶು ಅವರಿಗೆ ಭವ್ಯ ಸ್ವಾಗತ ಕೋರಿದರು. ಶುಭಾಂಶು ಶುಕ್ಲಾ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ನವದೆಹಲಿ, ಆಗಸ್ಟ್ 17: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಭಾನುವಾರ ಮುಂಜಾನೆ ಅಮೆರಿಕದಿಂದ ಭಾರತಕ್ಕೆ ಬಂದಿಳಿದಿದ್ದಾರೆ.ನವದೆಹಲಿ ವಿಮಾನ ನಿಲ್ದಾಣ ತಲುಪಿದ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ವಿದ್ಯಾರ್ಥಿಗಳ ಗುಂಪು ಶುಭಾಂಶು ಅವರಿಗೆ ಭವ್ಯ ಸ್ವಾಗತ ಕೋರಿದರು.
ಶುಭಾಂಶು ಶುಕ್ಲಾ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದಾದ ನಂತರ ಅವರು ಲಕ್ನೋಗೆ ಹೋಗಲಿದ್ದಾರೆ. ಭಾರತದ ಗಗನಯಾನ ಮಿಷನ್‌ಗೆ ಆಯ್ಕೆಯಾದ ಮತ್ತೊಬ್ಬ ಗಗನಯಾತ್ರಿ ಶುಭಾಂಶು ಜೊತೆಗೆ ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್ ಕೂಡ ಭಾರತಕ್ಕೆ ಮರಳಿದ್ದಾರೆ.
ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಜೂನ್ 25 ರಂದು ಅಮೆರಿಕದ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಹೊರಟು ಜೂನ್ 26 ರಂದು ISS ನೊಂದಿಗೆ ಸಂಪರ್ಕ ಸಾಧಿಸಿದ ನಾಸಾದ ಆಕ್ಸಿಯಮ್ -4 ಖಾಸಗಿ ಬಾಹ್ಯಾಕಾಶ ಕಾರ್ಯಾಚರಣೆಯ ಭಾಗವಾಗಿದ್ದರು.
ಅವರು, ಅಮೆರಿಕದ ಪೆಗ್ಗಿ ವಿಟ್ಸನ್, ಪೋಲೆಂಡ್‌ನ ಸ್ಲಾವೋಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ ಮತ್ತು ಹಂಗೇರಿಯ ಟಿಬೋರ್ ಕಾಪು ಅವರೊಂದಿಗೆ 18 ದಿನಗಳ ಕಾರ್ಯಾಚರಣೆಯಲ್ಲಿ 60 ಕ್ಕೂ ಹೆಚ್ಚು ಪ್ರಯೋಗಗಳು ಮತ್ತು 20 ಸಾರ್ವಜನಿಕ ಸಂಪರ್ಕ ಅವಧಿಗಳನ್ನು ನಡೆಸಿದರು. ಜುಲೈ 15 ರಂದು ಶುಭಾಂಶು ಭೂಮಿಗೆ ಮರಳಿದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

