AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸವದತ್ತಿಯಲ್ಲಿ ಪತ್ತೆಯಾಯ್ತು ಪ್ರಾಚೀನ ಚಿನ್ನದ ನಾಣ್ಯಗಳ ನಿಧಿ

ಸವದತ್ತಿಯಲ್ಲಿ ಪತ್ತೆಯಾಯ್ತು ಪ್ರಾಚೀನ ಚಿನ್ನದ ನಾಣ್ಯಗಳ ನಿಧಿ

ಸಹದೇವ್​ ಮಾನೆ
| Edited By: |

Updated on: Sep 05, 2026 | 5:07 PM

Share

ಬೆಳಗಾವಿ ಜಿಲ್ಲೆಯ ಇಂಚಲ ಗ್ರಾಮದಲ್ಲಿ ಬಿ.ಸಿ.ಎಂ ಹಾಸ್ಟೆಲ್ ಸಮೀಪ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ 14 ಚಿನ್ನದ ನಾಣ್ಯಗಳ ನಿಧಿ ಪತ್ತೆಯಾಗಿದೆ. ಪ್ರಾಮಾಣಿಕತೆ ಮೆರೆದ ಕಾರ್ಮಿಕರು, ಸಿಕ್ಕ ನಿಧಿಯನ್ನು ಪಿಡಿಓ ಮೂಲಕ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಈ ಚಿನ್ನದ ನಾಣ್ಯಗಳು ಗಂಗರ ಕಾಲಕ್ಕೆ ಸೇರಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬೆಳಗಾವಿ, ಸೆ.5: ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ ನಿಧಿ ಪತ್ತೆಯಾದ ಘಟನೆ ವರದಿಯಾಗಿದೆ. ವಿಬಿಜಿ ರಾಮ್ ಜಿ ಯೋಜನೆಯಡಿ ಬಿ.ಸಿ.ಎಂ ಹಾಸ್ಟೆಲ್ ಸಮೀಪ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರಿಗೆ ಗುದ್ದಲಿ ಹಾಕಿದಾಗ ಮಣ್ಣಿನ ಮಡಿಕೆಯೊಂದು ಸಿಕ್ಕಿದೆ. ಈ ಮಡಿಕೆಯನ್ನು ಪರಿಶೀಲಿಸಿದಾಗ ಅದರೊಳಗೆ ಪ್ರಾಚೀನ ಕಾಲದ ಚಿನ್ನದ ನಾಣ್ಯಗಳು ಪತ್ತೆಯಾಗಿವೆ. ಕಾರ್ಮಿಕರಿಗೆ ಒಟ್ಟು 14 ಚಿನ್ನದ ನಾಣ್ಯಗಳು ಸಿಕ್ಕಿದ್ದು, ಆರಂಭದಲ್ಲಿ ಅವುಗಳನ್ನು ಮನೆಯಲ್ಲಿ ಇಟ್ಟುಕೊಂಡಿದ್ದರು. ನಂತರ, ಇದು ಸರ್ಕಾರದ ಸ್ವತ್ತು ಎಂದು ಅರಿತು, ಪಿಡಿಓ ಅವರನ್ನು ಸಂಪರ್ಕಿಸಿದ್ದಾರೆ. ಪ್ರಾಮಾಣಿಕವಾಗಿ ಪಿಡಿಓ ಅವರಿಗೆ ನಾಣ್ಯಗಳನ್ನು ಹಸ್ತಾಂತರಿಸಿದ್ದಾರೆ. ಪಿಡಿಓ ಅವರು ಉಪ ತಹಶೀಲ್ದಾರ್, ಸರ್ಕಲ್ ಇನ್ಸ್‌ಪೆಕ್ಟರ್ ಮತ್ತು ವಿ.ಎನ್ ಸಮ್ಮುಖದಲ್ಲಿ ಪ್ರೊಸೀಡಿಂಗ್ ನಡೆಸಿ, ನಾಣ್ಯಗಳನ್ನು ಇ.ಓ ಮೂಲಕ ತಹಶೀಲ್ದಾರ್‌ಗೆ ಒಪ್ಪಿಸಿದ್ದಾರೆ. ತಹಶೀಲ್ದಾರ್ ಅವರು ಸ್ಥಳೀಯ ಆಭರಣ ವ್ಯಾಪಾರಿ ನಿಕ್ಕಮ್ ಅವರ ಮೂಲಕ ನಾಣ್ಯಗಳ ತೂಕ ಮತ್ತು ಮೌಲ್ಯವನ್ನು ಅಂದಾಜಿಸಿದ್ದಾರೆ. ಒಟ್ಟು 54.8 ಗ್ರಾಂ ತೂಕದ ಈ ನಾಣ್ಯಗಳ ಮೌಲ್ಯ ಸುಮಾರು ₹8.27 ಲಕ್ಷ ಎಂದು ಅಂದಾಜಿಸಲಾಗಿದೆ. ಈ ನಾಣ್ಯಗಳು ಗಂಗರ ಕಾಲಕ್ಕೆ ಸೇರಿದ್ದು, ಆನೆ ಸಿಂಬಲ್ ಹೊಂದಿವೆ ಎಂದು ತಜ್ಞರು ಗುರುತಿಸಿದ್ದಾರೆ. ಜಿಲ್ಲಾಡಳಿತ ಈ ಪ್ರದೇಶದ ಸಂರಕ್ಷಣೆ ಹಾಗೂ ಮುಂದಿನ ಕ್ರಮಗಳ ಬಗ್ಗೆ ನಿರ್ಧರಿಸಲಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More