ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ ಆದೇಶಿಸುವೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ
Honeytrap Case: ಕರ್ನಾಟಕದಲ್ಲಿ ಹನಿ ಟ್ರ್ಯಾಪ್ ಬಗ್ಗೆ ಕೇಳಿ ಬರುತ್ತಿದ್ದ ಗುಸು, ಗುಸು ಬಗ್ಗೆ ವಿಧಾನಸಭೆಯಲ್ಲಿ ಗಹನವಾದ ಚರ್ಚೆ ನಡೆದಿದೆ. ಸದನದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹನಿಟ್ರ್ಯಾಪ್ ವಿಚಾರವನ್ನು ಪ್ರಸ್ತಾಪ ಮಾಡಿದರು. ನೇರವಾಗಿ ಸಹಕಾರ ಸಚಿವರ ಮೇಲೆ ಹನಿಟ್ರ್ಯಾಪ್ ಆಗಿದೆ ಎಂದು ಹೇಳಿದರು. ಬಳಿಕ ರಾಜಣ್ಣ ಎದ್ದು ನಿಂತು ನನ್ನ ಮೇಲೆ ಹನಿಟ್ರ್ಯಾಪ್ ಯತ್ನವಾಗಿದೆ ಎಂದು ಒಪ್ಪಿಕೊಂಡರು. ಇದನ್ನು ಇದಕ್ಕೆ ಗೃಹ ಸಚಿವ ಪರಮೇಶ್ವರ್ ಸಹ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು, (ಮಾರ್ಚ್ 20): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೆ ಹನಿಟ್ರ್ಯಾಪ್ (Honeytrap Case)ಸುದ್ದು ಮಾಡಿದೆ. ಹಿರಿಯ ಸಚಿವ ಕೆಎನ್ ರಾಜಣ್ಣ (KN rajanna) ಅವರನ್ನು ಹನಿಟ್ರ್ಯಾಪ್ ಬಲೆಗೆ ಬೀಳಿಸುವ ಯತ್ನ ನಡೆದಿದೆ. ಈ ಬಗ್ಗೆ ರಾಜಣ್ಣ ಅವರೇ ಸದದನಲ್ಲಿ ಬಹಿರಂಗಪಡಿಸಿದ್ದು, ಭಾರೀ ಸಂಚಲನಕ್ಕೆ ಕಾರಣವಾಗಿದೆ. ಸಾರ್ವಜನಿಕ ಜೀವನದಲ್ಲಿ ಹೀಗಾಗಬಾರದು. ಅವರು ಯಾರೇ ಇರಲಿ ಬಹಿರಂಗ ಆಗಲಿ. ವಾಸ್ತವ ಏನು ಎಂಬುದನ್ನ ಜನರಿಗೆ ಗೊತ್ತಾಗಬೇಕು. ಇದರ ತನಿಖೆಯನ್ನ ಮಾಡಿಸಬೇಕು ಎಂದು ಗೃಹ ಮಂತ್ರಿಗಳಿಗೆ ನಾನು ಒತ್ತಾಯಿಸುತ್ತೇನೆ. ಇದರಲ್ಲಿ ಯಾರೆಲ್ಲಾ ಇದ್ದಾರೆ. ಇದರ ಪ್ರೊಡ್ಯೂಸರ್ ಯಾರು. ಎಲ್ಲಾ ತನಿಖೆ ಮೂಲಕ ಹೊರಗೆ ಬರಬೇಕು. ಇದೊಂದು ಪಿಡುಗು, ಸಾರ್ವಜನಿಕವಾಗಿ ಬಹಿರಂಗವಾಗಬೇಕು. ನನ್ನ ಮೇಲೆ ಕೂಡ ಅಟೆಂಪ್ಟ್ ಮಾಡಿದ ಬಗ್ಗೆ ಪುರಾವೆ ಇವೆ. ಈ ಬಗ್ಗೆ ಲಿಖಿತ ದೂರು ನೀಡುತ್ತೇನೆ ಎಂದರು.
ಇನ್ನು ರಾಜಣ್ಣ ಅವರು ಈ ಹನಿಟ್ರ್ಯಾಪ್ ಬಗ್ಗೆ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ್, ರಾಜಣ್ಣ ಅವರು ಲಿಖಿತ ದೂರು ನೀಡುವುದಾಗಿ ಹೇಳಿದ್ದಾರೆ. ಲಿಖಿತ ದೂರು ನೀಡಿದರೆ ಉನ್ನತ ಮಟ್ಟದ ತನಿಖೆಗೆ ಆದೇಶಿಸುವೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ರಾಜ್ಯ ರಾಜಕಾರನದಲ್ಲಿ ಹನಿಟ್ರ್ಯಾಪ್ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.