Farmers Protest Against Gutkha Ban: ಗುಟ್ಕಾ ನಿಷೇಧ ಖಂಡಿಸಿ ಅಡಿಕೆ ಬೆಳೆಗಾರರ ಪ್ರತಿಭಟನೆ: ಹೊನ್ನಾಳಿಯಿಂದ ಪಾದಯಾತ್ರೆ

Edited By:

Updated on: Aug 27, 2026 | 12:35 PM

ಗುಟ್ಕಾ ನಿಷೇಧನಿರ್ಧಾರವನ್ನು ವಿರೋಧಿಸಿ ಹೊನ್ನಾಳಿ ಅಡಿಕೆ ಬೆಳೆಗಾರರು ಬೃಹತ್ ಪಾದಯಾತ್ರೆ ನಡೆಸಿದ್ದಾರೆ. ಹೊನ್ನಾಳಿಯ ಹಿರೇಕಲ್ ಮಠದಿಂದ ಪ್ರಾರಂಭವಾದ ಈ ಪಾದಯಾತ್ರೆಯಲ್ಲಿ ರೈತರು, ರೈತ ಮೋರ್ಚಾ ಸದಸ್ಯರು ಮತ್ತು ಸ್ಥಳೀಯ ಮುಖಂಡರು ಭಾಗವಹಿಸಿದ್ದರು. ನಾಳೆ ದಾವಣಗೆರೆಯಲ್ಲಿ ಅಡಿಕೆ ಬೆಳಗಾರರ ಬೃಹತ್ ಪ್ರತಿಭಟನಾ ಸಭೆ ನಡೆಯಲಿದ್ದು, ಎಸಿ ಕಚೇರಿ ಮುತ್ತಿಗೆಗೂ ನಿರ್ಧರಿಸಲಾಗಿದೆ.

ದಾವಣಗೆರೆ, ಆಗಸ್ಟ್​​ 27: ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ಹಿನ್ನೆಲೆ ಅಡಿಕೆ ಬೆಳಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಅದೇಶ ವಾಪಸ್ಸಿಗೆ ಆಗ್ರಹಿಸಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ನೇತ್ರತ್ವದಲ್ಲಿ ದಾವಣಗೆರೆ ಜಿಲ್ಲೆಯ ಹೊನ್ನಾಳಿಯಿಂದ ಅಡಿಕೆ ಬೆಳಗಾರರ ಪಾದಯಾತ್ರೆ ಆರಂಭವಾಗಿದೆ. ನಾಳೆ ದಾವಣಗೆರೆಯಲ್ಲಿ ಅಡಿಕೆ ಬೆಳಗಾರರ ಬೃಹತ್ ಪ್ರತಿಭಟನಾ ಸಭೆ ನಡೆಯಲಿದ್ದು, ಎಸಿ ಕಚೇರಿ ಮುತ್ತಿಗೆಗೂ ನಿರ್ಧರಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Aug 27, 2026 11:34 AM
Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More