ಹಾಸನದಲ್ಲಿ ಶಿವಲಿಂಗೇಗೌಡರಿಗೆ ಸನ್ಮಾನ ಕಾರ್ಯಕ್ರಮ; ಬಂದವರಿಗೆ ಭರ್ಜರಿ ಬಾಡೂಟ

| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 11, 2024 | 5:46 PM

ಗೃಹಮಂಡಳಿ ನೂತನ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡರಿಗೆ (KM Shivalinge Gowda)ಹಾಸನ ನಗರದ ತಾಲ್ಲೂಕು ಕಚೇರಿ ಪಕ್ಕದ ರಸ್ತೆಯಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಬಂದಂತಹ ಸಾವಿರಾರು ಮಂದಿಗೆ ಭರ್ಜರಿ ಬಾಡೂಟ ವ್ಯವಸ್ಥೆ ಮಾಡಲಾಗಿದ್ದು, ಕಾರ್ಯಕ್ರಮ ಪ್ರಾರಂಭವಾಗುವ ಮುನ್ನವೇ ಕಾರ್ಯಕರ್ತರು ಬಾಡೂಟ ಸವಿದರು.

ಹಾಸನ, ಫೆ.11: ನಗರದ ತಾಲ್ಲೂಕು ಕಚೇರಿ ಪಕ್ಕದ ರಸ್ತೆಯಲ್ಲಿ ಗೃಹಮಂಡಳಿ ನೂತನ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡರಿಗೆ (KM Shivalinge Gowda) ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಚಾಲನೆ ನೀಡಿದರು. ಜೊತೆಗೆ ಕಾರ್ಯಕ್ರಮಕ್ಕೆ ಬಂದಂತಹ ಸಾವಿರಾರು ಮಂದಿಗೆ ಭರ್ಜರಿ ಬಾಡೂಟ ವ್ಯವಸ್ಥೆ ಮಾಡಲಾಗಿದ್ದು, ಕಾರ್ಯಕ್ರಮ ಪ್ರಾರಂಭವಾಗುವ ಮುನ್ನವೇ ಕಾರ್ಯಕರ್ತರು ಬಾಡೂಟ ಸವಿದಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಪರಾಜಿತ ಅಭ್ಯರ್ಥಿಗಳು, ಮುಖಂಡರು ಭಾಗಿಯಾಗಿದ್ದರು.

ಬಳಿಕ ಮಾತನಾಡಿದ ಕಾಂಗ್ರೆಸ್​ ಶಾಸಕ ಕೆ.ಎಂ.ಶಿವಲಿಂಗೇಗೌಡ ‘ಅನುದಾನ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ ಆಗ್ತಿದೆ. ಕರ್ನಾಟಕ ರಾಜ್ಯ 4.3 ಲಕ್ಷ ಕೋಟಿ ಟ್ಯಾಕ್ಸ್ ಪಾವತಿಸುತ್ತದೆ. ಕೇಂದ್ರ ಕೊಡುತ್ತಿರುವುದು ಕೇವಲ 53 ಸಾವಿರ ಕೋಟಿ ಮಾತ್ರ, ನಮ್ಮ ರಾಜ್ಯದ ಜನ ಏನು ಅನ್ಯಾಯ ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಆಪರೇಷನ್ ಕಮಲ ಮೂಲಕ ನೀವು ರಾಜ್ಯದಲ್ಲಿ ಅಧಿಕಾರ ಮಾಡಿದ್ದು, ಜನ ಯಾವತ್ತೂ ಅಧಿಕಾರ ನಡೆಸಲು ನೇರವಾಗಿ ಆಯ್ಕೆ ಮಾಡಿಲ್ಲ. ಬಿಜೆಪಿಯವರು ಪರಿಹಾರ ಕೊಡದಿದ್ರೆ ಹೋರಾಟ ಮಾಡ್ತೀವಿ ಅಂತಾರೆ, ನಮ್ಮ ರಾಜ್ಯಕ್ಕೆ 1.87 ಲಕ್ಷ ಕೋಟಿ ರೂ. ತೆರಿಗೆ ಅನ್ಯಾಯ ಆಗಿದೆ. ನಿಮಗೆ ಮಾನ ಮರ್ಯಾದೆ ಇದ್ದರೆ ಕೇಂದ್ರದ ಬಳಿ ಪರಿಹಾರ ಕೇಳಿ ಎಂದು ಬಿಜೆಪಿ ವಿರುದ್ಧ ‘ಕೈ’ ಶಾಸಕ ಶಿವಲಿಂಗೇಗೌಡ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ