AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಇಂದು ಈ ರಾಶಿಯವರು ಇತರರಿಂದ ಸಾಲ ಪಡೆಯದಿರಿ

Horoscope Today: ಇಂದು ಈ ರಾಶಿಯವರು ಇತರರಿಂದ ಸಾಲ ಪಡೆಯದಿರಿ

ಭಾವನಾ ಹೆಗಡೆ
|

Updated on: Nov 11, 2026 | 6:46 AM

Share

ನವೆಂಬರ್ 11, ಬುಧವಾರದ ದಿನ ಭವಿಷ್ಯದಲ್ಲಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದಾರೆ. ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಕೌಟುಂಬಿಕ ಸಂಬಂಧಗಳು, ಪ್ರಯಾಣ ಮತ್ತು ಇತರ ಪ್ರಮುಖ ಅಂಶಗಳ ಕುರಿತು ಜ್ಯೋತಿಷ್ಯ ಸಲಹೆಗಳನ್ನು ನೀಡಲಾಗಿದೆ. ಪ್ರತಿಯೊಂದು ರಾಶಿಗೂ ಅದೃಷ್ಟ ಸಂಖ್ಯೆ, ಬಣ್ಣ ಮತ್ತು ಮಂತ್ರಗಳ ಕುರಿತು ಮಾಹಿತಿ ಲಭ್ಯವಿದೆ.

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ನವೆಂಬರ್ 11, ಬುಧವಾರದ ದ್ವಾದಶ ರಾಶಿ ಫಲಾಫಲಗಳನ್ನು ತಿಳಿಸಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಕಾರ್ತಿಕ ಮಾಸ, ಶುಕ್ಲ ಪಕ್ಷದ ಅನುರಾಧಾ ನಕ್ಷತ್ರದೊಂದಿಗೆ ಕೂಡಿದೆ. 11-11-2026 ರ ಈ ದಿನವನ್ನು “ಮಾಸ್ಟರ್ ನಂಬರ್” ದಿನ ಎಂದು ಪರಿಗಣಿಸಲಾಗಿದ್ದು, ಶುಭ ಕಾರ್ಯಗಳಿಗೆ, ಹೊಸ ನಿರ್ಧಾರಗಳಿಗೆ, ಗೃಹಪ್ರವೇಶ ಮತ್ತು ನಿರ್ಮಾಣ ಕಾರ್ಯಗಳಿಗೆ ಇದು ಅತ್ಯಂತ ಶುಭಕರವಾಗಿದೆ ಎಂದು ಗುರೂಜಿ ತಿಳಿಸಿದ್ದಾರೆ.

ಈ ದಿನ ವಾಸ್ತುಪುರುಷ ರಾಜಯೋಗದಲ್ಲಿರುವುದರಿಂದ ಪೂಜೆ ಪುನಸ್ಕಾರಗಳು ಉತ್ತಮ ಫಲ ನೀಡುತ್ತವೆ. ರವಿ ತುಲಾ ರಾಶಿಯಲ್ಲಿ ಮತ್ತು ಚಂದ್ರ ವೃಶ್ಚಿಕ ರಾಶಿಯ ಅನುರಾಧಾ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ. ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುವವರು ಮತ್ತು ವಿವಾಹ ವಾರ್ಷಿಕೋತ್ಸವ ಇರುವವರಿಗೆ ಶುಭವಾಗಲಿ ಎಂದು ಗುರೂಜಿ ಹಾರೈಸಿದ್ದಾರೆ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More