Horoscope Today: ಇಂದು ಈ ರಾಶಿಯವರು ಅತಿಯಾಗಿ ನಂಬಿದವರಿಂದ ಮೋಸ ಹೋಗುವ ಸಾಧ್ಯತೆ

Updated on: Nov 13, 2026 | 6:58 AM

ನವೆಂಬರ್ 13, ಶುಕ್ರವಾರದ ದಿನ ಭವಿಷ್ಯದಲ್ಲಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದಾರೆ. ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಕೌಟುಂಬಿಕ ಸಂಬಂಧಗಳು, ಪ್ರಯಾಣ ಮತ್ತು ಇತರ ಪ್ರಮುಖ ಅಂಶಗಳ ಕುರಿತು ಜ್ಯೋತಿಷ್ಯ ಸಲಹೆಗಳನ್ನು ನೀಡಲಾಗಿದೆ. ಪ್ರತಿಯೊಂದು ರಾಶಿಗೂ ಅದೃಷ್ಟ ಸಂಖ್ಯೆ, ಬಣ್ಣ ಮತ್ತು ಮಂತ್ರಗಳ ಕುರಿತು ಮಾಹಿತಿ ಲಭ್ಯವಿದೆ.

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ನವೆಂಬರ್ 13, ಶುಕ್ರವಾರದ ದ್ವಾದಶ ರಾಶಿ ಫಲಾಫಲಗಳನ್ನು ತಿಳಿಸಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಶುಕ್ಲ ಪಕ್ಷದ ಚೌತಿ, ಮೂಲಾ ನಕ್ಷತ್ರ, ಧೃತಿ ಯೋಗ ಮತ್ತು ಭದ್ರಕರಣ ಇರತಕ್ಕಂತಹ ದಿನವಾಗಿದೆ.

ಈ ದಿನದ ರಾಹುಕಾಲ ಬೆಳಗ್ಗೆ 10:36 ರಿಂದ 12:03 ರ ತನಕ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಅಥವಾ ಶುಭ ಕಾಲವು ಮಧ್ಯಾಹ್ನ 12:03 ರಿಂದ 1:30 ರ ತನಕ ಇರಲಿದೆ. ಶುಕ್ಲ ಪಕ್ಷದ ಚೌತಿಯನ್ನು “ವಿನಾಯಕಿ ಚತುರ್ಥಿ” ಎಂದು ಆಚರಿಸಲಾಗುತ್ತದೆ. ಈ ದಿನ ವಿನಾಯಕನ ಪೂಜೆಗೆ ಹೆಚ್ಚಿನ ಪ್ರಾಶಸ್ತ್ಯವಿದ್ದು, ಹೊಸ ಯೋಜನೆಗಳು, ಉತ್ತಮ ವಿದ್ಯಾಭ್ಯಾಸ, ಉದ್ಯೋಗದಲ್ಲಿ ಪ್ರಗತಿ ಮುಂತಾದ ಶುಭ ಕಾರ್ಯಗಳಿಗೆ ಇದು ಅತ್ಯಂತ ಫಲಪ್ರದವಾಗಿದೆ ಎಂದು ಗುರೂಜಿ ವಿವರಿಸಿದ್ದಾರೆ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More