Horoscope Today: ಇಂದು ಈ ರಾಶಿಯವರು ಮರೆತ ಹಣ ವಾಪಸ್ ಸಿಗುವ ಸಾಧ್ಯತೆ

Updated on: Nov 14, 2026 | 6:42 AM

ನವೆಂಬರ್ 14, ಶನಿವಾರದ ದಿನ ಭವಿಷ್ಯದಲ್ಲಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದಾರೆ. ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಕೌಟುಂಬಿಕ ಸಂಬಂಧಗಳು, ಪ್ರಯಾಣ ಮತ್ತು ಇತರ ಪ್ರಮುಖ ಅಂಶಗಳ ಕುರಿತು ಜ್ಯೋತಿಷ್ಯ ಸಲಹೆಗಳನ್ನು ನೀಡಲಾಗಿದೆ. ಪ್ರತಿಯೊಂದು ರಾಶಿಗೂ ಅದೃಷ್ಟ ಸಂಖ್ಯೆ, ಬಣ್ಣ ಮತ್ತು ಮಂತ್ರಗಳ ಕುರಿತು ಮಾಹಿತಿ ಲಭ್ಯವಿದೆ.

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ನವೆಂಬರ್ 14, ಶನಿವಾರದ ದ್ವಾದಶ ರಾಶಿ ಫಲಾಫಲಗಳನ್ನು ತಿಳಿಸಿದ್ದಾರೆ.ಇದು ಪರಾಭವನಾಂ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸದ ಶರದೃತು ಶುಕ್ಲ ಪಕ್ಷದ ಪಂಚಮಿ ತಿಥಿ, ಪೂರ್ವಾಷಾಡ ನಕ್ಷತ್ರ ಮತ್ತು ಶೂಲ ಯೋಗದ ದಿನವಾಗಿದೆ.

ಈ ದಿನವನ್ನು ಪಾಂಡವ ಪಂಚಮಿ ಹಾಗೂ ಜ್ಞಾನ ಪಂಚಮಿ ಎಂದೂ ಆಚರಿಸಲಾಗುತ್ತದೆ. ಹೊಸ ಕಾರ್ಯಗಳಿಗೆ, ಹೂಡಿಕೆಗೆ, ಅಥವಾ ಸಾಲ ಕೇಳಲು ಪಂಚಮಿ ತಿಥಿ ಶುಭಕರವೆಂದು ಪರಿಗಣಿಸಲಾಗುತ್ತದೆ. ಸೂರ್ಯನು ತುಲಾ ರಾಶಿಯಲ್ಲಿ ಮತ್ತು ಚಂದ್ರನು ಧನು ರಾಶಿಯ ಪೂರ್ವಾಷಾಡ ನಕ್ಷತ್ರದಲ್ಲಿ ಸಂಚರಿಸುತ್ತಾನೆ.

ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭ ಫಲದಿಂದ ವೃತ್ತಿ ಮತ್ತು ಆದಾಯದಲ್ಲಿ ಏರಿಕೆ, ಹೊಸ ವಾಹನ ಯೋಗ ಹಾಗೂ ಕುಟುಂಬದಲ್ಲಿ ಶುಭ ಸುದ್ದಿಗಳು ಸಿಗಲಿವೆ. ವೃಷಭ ರಾಶಿಯವರಿಗೆ ನಾಲ್ಕು ಗ್ರಹಗಳ ಶುಭ ಫಲದಿಂದ ಸಕಾರಾತ್ಮಕ ಭಾವನೆಗಳು, ಆದಾಯದಲ್ಲಿ ಏರಿಕೆ ಮತ್ತು ಹೂಡಿಕೆಯಿಂದ ಲಾಭ ದೊರೆಯಲಿದೆ ಎಂದು ಗುರೂಜಿ ವಿವರಿಸಿದ್ದಾರೆ.

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More