AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!

Horoscope Today: ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!

ಭಾವನಾ ಹೆಗಡೆ
|

Updated on: Nov 01, 2026 | 6:42 AM

Share

ನವೆಂಬರ್ 01, ಭಾನುವಾರದ ದಿನ ಭವಿಷ್ಯದಲ್ಲಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದಾರೆ. ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಕೌಟುಂಬಿಕ ಸಂಬಂಧಗಳು, ಪ್ರಯಾಣ ಮತ್ತು ಇತರ ಪ್ರಮುಖ ಅಂಶಗಳ ಕುರಿತು ಜ್ಯೋತಿಷ್ಯ ಸಲಹೆಗಳನ್ನು ನೀಡಲಾಗಿದೆ. ಪ್ರತಿಯೊಂದು ರಾಶಿಗೂ ಅದೃಷ್ಟ ಸಂಖ್ಯೆ, ಬಣ್ಣ ಮತ್ತು ಮಂತ್ರಗಳ ಕುರಿತು ಮಾಹಿತಿ ಲಭ್ಯವಿದೆ.

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ನವೆಂಬರ್ 01, ಭಾನುವಾರದ ದ್ವಾದಶ ರಾಶಿ ಫಲಾಫಲಗಳನ್ನು ತಿಳಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ ದಕ್ಷಿಣಾಯನ ಆಶ್ವೀಜ ಮಾಸ, ಶರದೃತು ಕೃಷ್ಣ ಪಕ್ಷ ಸಪ್ತಮಿ, ಪುನರ್ವಸು ನಕ್ಷತ್ರ, ಸಾಧ್ಯ ಯೋಗ ಭದ್ರಕರಣದಿಂದ ಕೂಡಿದೆ. ಬೆಳಗ್ಗೆ 10:34 ರಿಂದ 12:03 ರವರೆಗೆ ಸಂಕಲ್ಪ ಕಾಲ, ಶುಭಕಾಲವಿರಲಿದ್ದು, ಸಂಜೆ 4:26 ರಿಂದ 5:54 ರವರೆಗೆ ರಾಹುಕಾಲವಿದೆ.

ಇಂದು ನವೆಂಬರ್ ಮಾಸದ ಪ್ರಪ್ರಥಮ ದಿನ ಮಾತ್ರವಲ್ಲದೆ, ಸಮಸ್ತ ಕನ್ನಡಿಗರು ಆಚರಿಸುವ ಕನ್ನಡ ರಾಜ್ಯೋತ್ಸವದ ವಿಶೇಷ ದಿನವೂ ಹೌದು. ಕನ್ನಡ, ನೀರು, ನೆಲ, ಜಲದ ಬಗ್ಗೆ ಅಭಿಮಾನ ಮೆರೆಯುವ ಮಹತ್ವದ ದಿನವಿದು. ಗ್ರಹಗಳ ಸ್ಥಾನವನ್ನು ನೋಡುವುದಾದರೆ, ರವಿ ತುಲಾ ರಾಶಿಯಲ್ಲಿದ್ದರೆ, ಚಂದ್ರ ಕಟಕ ರಾಶಿಯ ಪುನರ್ವಸು ನಕ್ಷತ್ರದಲ್ಲಿ ಸಂಚಾರ ಮಾಡುತ್ತಾನೆ. ಗುರು-ಚಂದ್ರರ ಸಂಯೋಗದಿಂದ ಗಜಕೇಸರಿ ಯೋಗ ಉಂಟಾಗಿರುವುದು ಈ ದಿನದ ವಿಶೇಷವಾಗಿದೆ. ಇದು ಮಹಾಯೋಗವೆಂದು ಪರಿಗಣಿಸಲಾಗುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More