Horoscope Today: ಇಂದು ರಾಶಿಯವರ ಅಪೂರ್ಣ ಕಾರ್ಯಗಳು ಪೂರ್ಣಗೊಳ್ಳುತ್ತವೆ

Updated on: Nov 27, 2026 | 6:51 AM

2026ರ ನವೆಂಬರ್ 27, ಶುಕ್ರವಾರದ ದಿನ ಭವಿಷ್ಯದಲ್ಲಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದಾರೆ. ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಕೌಟುಂಬಿಕ ಸಂಬಂಧಗಳು, ಪ್ರಯಾಣ ಮತ್ತು ಇತರ ಪ್ರಮುಖ ಅಂಶಗಳ ಕುರಿತು ಜ್ಯೋತಿಷ್ಯ ಸಲಹೆಗಳನ್ನು ನೀಡಲಾಗಿದೆ. ಪ್ರತಿಯೊಂದು ರಾಶಿಗೂ ಅದೃಷ್ಟ ಸಂಖ್ಯೆ, ಬಣ್ಣ ಮತ್ತು ಮಂತ್ರಗಳ ಕುರಿತು ಮಾಹಿತಿ ಲಭ್ಯವಿದೆ.

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ನವೆಂಬರ್ 27, ಶುಕ್ರವಾರದ ದ್ವಾದಶ ರಾಶಿ ಫಲಾಫಲಗಳನ್ನು ತಿಳಿಸಿದ್ದಾರೆ.ಇದು ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದ್ ಋತು, ಕೃಷ್ಣ ಪಕ್ಷ, ತದಿಗೆ, ಆರ್ದ್ರಾ ನಕ್ಷತ್ರ, ಸಾಧ್ಯ ಯೋಗ, ಭದ್ರ ಕರಣ ಇರತಕ್ಕಂತ ಈ ದಿನದ ರಾಹುಕಾಲ ಬೆಳಗ್ಗೆ 10:40 ರಿಂದ 12:07 ರ ತನಕ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ, ಶುಭಕಾಲ 12:07 ರಿಂದ 1:32 ರ ತನಕ ಇರಲಿದೆ.

ಈ ಕಾರ್ತಿಕ ಮಾಸದ ಶುಕ್ರವಾರದ ದಿನವು ಕನಕದಾಸ ಜಯಂತಿಯ ಶುಭಾಶಯಗಳೊಂದಿಗೆ ಸಡಗರವನ್ನು ಹೆಚ್ಚಿಸಿದೆ. ಜೊತೆಗೆ, ಸಂಕಷ್ಟ ಚತುರ್ಥಿಯ ಪರ್ವ ದಿನವೂ ಇದಾಗಿರುವುದರಿಂದ ವಿನಾಯಕನ ಪೂಜೆ ಮತ್ತು ಆಚರಣೆಗಳು ವಿಶೇಷ ಮಹತ್ವವನ್ನು ಹೊಂದಿವೆ. ಕಾಗಿನೆಲೆಯಲ್ಲಿ ರಥೋತ್ಸವ ಮತ್ತು ಇಂದ್ರಾಣಿ ಲಕ್ಷದೀಪೋತ್ಸವಗಳು ಸಹ ಈ ದಿನದ ವಿಶೇಷಗಳಾಗಿವೆ ಎಂದು ಬಸವರಾಜ್ ಗುರೂಜಿ ಹೇಳಿದ್ದಾರೆ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ. ಪತ್ರಿಕೋದ್ಯಮ ಇವರು ಇಷ್ಟಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್‌ನಲ್ಲಿ ವೃತ್ತಿ ಜೀವನ ಆರಂಭಿಸಿರುವ ಇವರು, ಸಂಸ್ಥೆಯಲ್ಲಿ ಒಂದು ವರ್ಷದ ವೃತ್ತಿ ಅನುಭವ ಹೊಂದಿದ್ದಾರೆ. ರಾಜ್ಯ ಮತ್ತು ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More