AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಲಾಭ!

Horoscope Today: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಲಾಭ!

ಭಾವನಾ ಹೆಗಡೆ
|

Updated on: Sep 30, 2026 | 7:00 AM

Share

ಸೆಪ್ಟೆಂಬರ್ 30, ಸೋಮವಾರದ ದಿನ ಭವಿಷ್ಯದಲ್ಲಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದಾರೆ. ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಕೌಟುಂಬಿಕ ಸಂಬಂಧಗಳು, ಪ್ರಯಾಣ ಮತ್ತು ಇತರ ಪ್ರಮುಖ ಅಂಶಗಳ ಕುರಿತು ಜ್ಯೋತಿಷ್ಯ ಸಲಹೆಗಳನ್ನು ನೀಡಲಾಗಿದೆ. ಪ್ರತಿಯೊಂದು ರಾಶಿಗೂ ಅದೃಷ್ಟ ಸಂಖ್ಯೆ, ಬಣ್ಣ ಮತ್ತು ಮಂತ್ರಗಳ ಕುರಿತು ಮಾಹಿತಿ ಲಭ್ಯವಿದೆ.

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಸೆಪ್ಟೆಂಬರ್ 30, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಕೃಷ್ಣಪಕ್ಷ ಚೌತಿ, ಭರಣಿ ನಕ್ಷತ್ರ, ಹರ್ಷಣ ಯೋಗ, ಬಾಲವ ಕರಣ ಇರತಕ್ಕಂತಹ ಈ ದಿನವು ವಿಷ್ಣು ಆರಾಧನೆಗೆ ವಿಶೇಷವಾಗಿದೆ ಎಂದು ಗುರೂಜಿ ತಿಳಿಸಿದ್ದಾರೆ.

ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಮೇಷ ರಾಶಿಯ ಭರಣಿ ನಕ್ಷತ್ರದಲ್ಲಿ, ಶುಕ್ರನ ನಕ್ಷತ್ರದಲ್ಲಿ ಸಂಚಾರ ಮಾಡುತ್ತಿದ್ದಾನೆ. ಈ ಗ್ರಹಗತಿಗಳ ಪ್ರಭಾವದಿಂದ ಪ್ರತಿಯೊಂದು ರಾಶಿಯ ಮೇಲೂ ವಿಭಿನ್ನ ಫಲಿತಾಂಶಗಳು ಗೋಚರಿಸಲಿವೆ. ಮೇಷ ರಾಶಿಯವರಿಗೆ ಆಕಸ್ಮಿಕ ಧನಯೋಗ, ವೃಷಭ ರಾಶಿಯವರಿಗೆ ಉದ್ಯೋಗದಲ್ಲಿ ಶುಭ, ಮಿಥುನ ರಾಶಿಯವರಿಗೆ ಆರ್ಥಿಕವಾಗಿ ಲಾಭದ ಯೋಗವಿದೆ ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More