AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ

Horoscope Today: ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ

ಭಾವನಾ ಹೆಗಡೆ
|

Updated on: Oct 05, 2026 | 6:33 AM

Share

ಅಕ್ಟೋಬರ್ 05, ಸೋಮವಾರದ ದಿನ ಭವಿಷ್ಯದಲ್ಲಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದಾರೆ. ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಕೌಟುಂಬಿಕ ಸಂಬಂಧಗಳು, ಪ್ರಯಾಣ ಮತ್ತು ಇತರ ಪ್ರಮುಖ ಅಂಶಗಳ ಕುರಿತು ಜ್ಯೋತಿಷ್ಯ ಸಲಹೆಗಳನ್ನು ನೀಡಲಾಗಿದೆ. ಪ್ರತಿಯೊಂದು ರಾಶಿಗೂ ಅದೃಷ್ಟ ಸಂಖ್ಯೆ, ಬಣ್ಣ ಮತ್ತು ಮಂತ್ರಗಳ ಕುರಿತು ಮಾಹಿತಿ ಲಭ್ಯವಿದೆ.

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಅಕ್ಟೋಬರ್ 05, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಇಂದು ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಕೃಷ್ಣ ಪಕ್ಷದ ದಶಮಿ ತಿಥಿ, ಪುಷ್ಯಾ ನಕ್ಷತ್ರ, ಶಿವಯೋಗ, ವಣಿಕಕರಣ ಇರುವ ಶುಭ ದಿನವಾಗಿದೆ.

ಬೆಳಗ್ಗೆ 7:32 ರಿಂದ 9:07 ರವರೆಗೆ ರಾಹುಕಾಲವಿದ್ದು, 9:08 ರಿಂದ 10:38 ರವರೆಗೆ ಸಂಕಲ್ಪ ಕಾಲವಿರುತ್ತದೆ. ಸೋಮವಾರ ಶಿವನ ಅನುಗ್ರಹಕ್ಕೆ ಪಾತ್ರರಾಗಲು ಶಿವನಿಗೆ ಅಭಿಷೇಕ, ನಾಮ ಸ್ಮರಣೆ, ದರ್ಶನ ಇವೆಲ್ಲವೂ ಕೂಡ ಅನುಕೂಲಕರವಾಗಿವೆ. ಗ್ರಹಗಳ ಸ್ಥಿತಿಗತಿಯಂತೆ, ರವಿ ಕನ್ಯಾ ರಾಶಿಯಲ್ಲಿ ಮತ್ತು ಚಂದ್ರ ಕರ್ಕಾಟಕ ರಾಶಿಯ ಪುಷ್ಯಾ ನಕ್ಷತ್ರದಲ್ಲಿ ಸಂಚರಿಸುತ್ತಿದ್ದಾನೆ. ಜನ್ಮದಿನ ಮತ್ತು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವ ಎಲ್ಲರಿಗೂ ಡಾ. ಬಸವರಾಜ ಗುರೂಜಿ ಶುಭ ಹಾರೈಸಿದ್ದಾರೆ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More